ಕೊರೋನ ಹೆಚ್ಚಳ ಹಿನ್ನೆಲೆ: ಗುಲಬರ್ಗಾ, ದಾವಣಗೆರೆ ವಿಶ್ವವಿದ್ಯಾಲಯಗಳ ಪರೀಕ್ಷೆಗಳು ಮುಂದೂಡಿಕೆ

Update: 2021-04-19 12:55 GMT

ಬೆಂಗಳೂರು, ಎ.19: ಕೊರೋನ ಸೋಂಕು ಹೆಚ್ಚಳ ಆಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದ ಹಲವು ವಿಶ್ವವಿದ್ಯಾಲಯಗಳು ಪರೀಕ್ಷೆಗಳನ್ನು ಮುಂದೂಡಿ ಆದೇಶ ಹೊರಡಿಸಿವೆ.

ಎ.19ರಿಂದ ಆರಂಭವಾಗಬೇಕಿದ್ದ ಗುಲಬರ್ಗಾ ವಿಶ್ವವಿದ್ಯಾಲಯದ 2, 4ನೆ ಸೆಮಿಸ್ಟರ್ ಪರೀಕ್ಷೆ ಮುಂದೂಡಲಾಗಿದೆ. ಪರೀಕ್ಷೆ ನಡೆಯುವ ದಿನಾಂಕವನ್ನು ತಿಳಿಸಲಾಗುವುದು ಎಂದು ವಿಶ್ವವಿದ್ಯಾಲಯದ ಪರೀಕ್ಷಾಂಗ ಕುಲಸಚಿವ ಪ್ರೊ.ಸೋನಾರ್‍ನಂದಪ್ಪ ತಿಳಿಸಿದ್ದಾರೆ.

ಎ.19ರಂದೇ ನಡೆಯಬೇಕಿದ್ದ ದಾವಣಗೆರೆ ವಿವಿಯ 'ಬಿ.ಎಡ್’ ಪರೀಕ್ಷೆ ಮುಂದೂಡಿಕೆಯಾಗಿದೆ. ಈ ಬಗ್ಗೆ ದಾವಣಗೆರೆ ವಿಶ್ವವಿದ್ಯಾಲಯ ಪರೀಕ್ಷಾಂಗ ವಿಭಾಗದ ಕುಲ ಸಚಿವೆ ಡಾ.ಎಚ್.ಎಸ್.ಅನಿತಾ ಮಾಹಿತಿ ನೀಡಿದ್ದಾರೆ.

ಜತೆಗೆ ಎಪ್ರಿಲ್ 20ರಿಂದ ಆರಂಭವಾಗಲಿರುವ ಸ್ನಾತಕೋತ್ತರ ಪರೀಕ್ಷೆಗಳನ್ನು ಕೂಡ ದಾವಣಗೆರೆ ವಿವಿ ಮುಂದೂಡಿಕೆ ಮಾಡಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News