ಮಹಿಳೆ ನಾಪತ್ತೆ

Update: 2021-04-19 13:52 GMT

ಉಡುಪಿ, ಎ.19: ಬ್ರಹ್ಮಾವರ ತಾಲೂಕು ತೆಕ್ಕಟ್ಟೆ ಕನ್ನುಕೆರೆಯ ಕೃಷ್ಣ ನಿಲಯ ನಿವಾಸಿ ಆಶಾ (28) ಎಂಬವರು ಮಾ.30ರಿಂದ ನಾಪತ್ತೆಯಾಗಿದ್ದಾರೆ. ಚಹರೆ: 5.1 ಅಡಿ ಎತ್ತರ, ಎಣ್ಣೆ ಕಪ್ಪು ಮೈಬಣ್ಣ, ಸಾಧಾರಣ ಶರೀರ, ಕೋಲು ಮುಖ ಹೊಂದಿದ್ದು, ಕನ್ನಡ ಭಾಷೆ ಮಾತನಾಡುತ್ತಾರೆ.

ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಕೋಟ ಪೊಲೀಸ್ ಠಾಣೆ ದೂ. ಸಂಖ್ಯೆ: 0820-2564155, ಮೊ.ನಂ: 9480805454, ಜಿಲ್ಲಾ ಪೊಲೀಸ್ ವೃತ್ತ ನಿರೀಕ್ಷಕರ ಕಚೇರಿ ದೂ.ಸಂಖ್ಯೆ: 0820-2561966, ಮೊ.ನಂ: 9480805432ನ್ನು ಸಂಪರ್ಕಿಸುವಂತೆ ಕೋಟ ಪೊಲೀಸ್ ಠಾಣೆಯ ಪೊಲೀಸ್ ಉಪ ನಿರೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News