ಉಡುಪಿ: ಜಿಲ್ಲೆಯಲ್ಲಿ 163 ಮಂದಿಗೆ ಕೊರೋನ ಪಾಸಿಟಿವ್

Update: 2021-04-19 14:07 GMT

ಉಡುಪಿ, ಎ.19: ಕೊರೋನ ಎರಡನೇ ಅಲೆ ಅಬ್ಬರ ಉಡುಪಿ ಜಿಲ್ಲೆಯಲ್ಲಿ ಹೆಚ್ಚಿದ್ದು, ಸೋಮವಾರ 163 ಮಂದಿಯಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ದಿನದಲ್ಲಿ 77 ಮಂದಿ ಸೋಂಕಿನಿಂದ ಗುಣಮುಖರಾದರೆ, 746 ಮಂದಿ ಈಗಲೂ ಸೋಂಕಿಗೆ ಸಕ್ರಿಯ ರಿದ್ದಾರೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಸುಧೀರ್‌ಚಂದ್ರ ಸೂಡ ತಿಳಿಸಿದ್ದಾರೆ.

ಇಂದು ಪಾಸಿಟಿವ್ ಬಂದ 163 ಮಂದಿಯಲ್ಲಿ 88 ಮಂದಿ ಪುರುಷರು ಹಾಗೂ 75 ಮಂದಿ ಮಹಿಳೆಯರು. ಇವರಲ್ಲಿ 85 ಮಂದಿ ಉಡುಪಿ ತಾಲೂಕಿನವರಾದರೆ 36 ಮಂದಿ ಕುಂದಾಪುರ ಹಾಗೂ 40 ಮಂದಿ ಕಾರ್ಕಳ ತಾಲೂಕಿನವರು. ಹೊರಜಿಲ್ಲೆಯ ಇಬ್ಬರು ಸಹ ಇಲ್ಲಿ ಸೋಂಕಿಗೆ ಪಾಸಿಟಿವ್ ಬಂದಿದ್ದಾರೆ. 163 ಮಂದಿಯಲ್ಲಿ 137 ಮಂದಿ ಹೋಮ್ ಐಸೋಲೇಷನ್‌ನಲ್ಲಿ ಚಿಕಿತ್ಸೆ ಪಡೆಯುತಿದ್ದಾರೆ ಎಂದು ಡಾ.ಸೂಡ ತಿಳಿಸಿದರು.

ರವಿವಾರ 77 ಮಂದಿ ಸೋಂಕಿನಿಂದ ಗುಣಮುಖರಾಗುವ ಮೂಲಕ ಜಿಲ್ಲೆಯಲ್ಲಿ ಕೊರೋನದಿಂದ ಚೇತರಿಸಿಕೊಂಡವರ ಸಂಖ್ಯೆ ಈಗ 25,964ಕ್ಕೇರಿದೆ. ನಿನ್ನೆ ಜಿಲ್ಲೆಯ 2787 ಮಂದಿ ಕೋವಿಡ್ ಪರೀಕ್ಷೆ ಮಾಡಿಸಿಕೊಂಡಿದ್ದಾರೆ. ಇಂದಿನ 163 ಮಂದಿ ಸೇರಿ ಈವರೆಗೆ ಸೋಂಕಿಗೆ ಪಾಸಿಟಿವ್ ಬಂದವರ ಸಂಖ್ಯೆ 26,903 ಎಂದು ಡಾ.ಸೂಡ ತಿಳಿಸಿದರು. ಉಡುಪಿ ಜಿಲ್ಲೆಯಲ್ಲಿ ಈವರೆಗೆ ಒಟ್ಟು 4,68,767 ಮಂದಿಯನ್ನು ಕೋವಿಡ್ ಪರೀಕ್ಷೆಗೊಳಪಡಿಸಲಾಗಿದೆ. ಜಿಲ್ಲೆಯಲ್ಲಿ ಇಂದು ಕೋವಿಡ್‌ಗೆ ಯಾರೂ ಮೃತಪಟ್ಟಿಲ್ಲ. ಈವರೆಗೆ ಜಿಲ್ಲೆಯಲ್ಲಿ ಕೋವಿಡ್‌ಗೆ ಬಲಿಯಾದವರ ಸಂಖ್ಯೆ 193ರಲ್ಲಿ ಸ್ಥಿರವಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News