×
Ad

ದುಬೈ ಪ್ರಯಾಣಿಕರಿಗೆ ಕೋವಿಡ್ ಪರೀಕ್ಷಾ ಪ್ರಮಾಣಪತ್ರದ ಅವಧಿ ಕಡಿತ

Update: 2021-04-19 20:21 IST
ಸಾಂದರ್ಭಿಕ ಚಿತ್ರ

ಮಂಗಳೂರು, ಎ.19: ದುಬೈಗೆ ಭಾರತದಿಂದ ತೆರಳುವ ಪ್ರಯಾಣಿಕರು ಹೊಂದಿರಬೇಕಾದ ಕೋವಿಡ್ ಟೆಸ್ಟ್ ಪ್ರಮಾಣ ಪತ್ರದ ಅವಧಿಯನ್ನು 72 ಗಂಟೆಯಿಂದ 48 ಗಂಟೆಗೆ ಇಳಿಸಲಾಗಿದೆ.

ದುಬೈ ನಾಗರಿಕ ವಿಮಾನಯಾನ ಪ್ರಾಧಿಕಾರವು ನೀಡಿರುವ ಮಾಹಿತಿ ಪ್ರಕಾರ ಎ.22ರಿಂದ ಕಡ್ಡಾಯವಾಗಿ ಇದು ಅನ್ವಯವಾಗಲಿದೆ. ಭಾರತದ ಯಾವುದೇ ವಿಮಾನ ನಿಲ್ದಾಣದಿಂದ ದುಬೈಗೆ ಪ್ರಯಾಣಿಕರನ್ನು ಕರೆತರುವ ವೇಳೆ ಅವರಲ್ಲಿ ಸ್ಯಾಂಪಲ್ ಸಂಗ್ರಹಿಸುವುದರಿಂದ 48 ಗಂಟೆ ಮೀರದ ಅಧಿಕೃತ ಕೋವಿಡ್ ಟೆಸ್ಟ್ ಪ್ರಮಾಣಪತ್ರ ಬೇಕು ಎಂದು ತಿಳಿಸಲಾಗಿದೆ. ಅಲ್ಲದೆ ಸ್ಯಾಂಪಲ್ ಸಂಗ್ರಹದ ದಿನಾಂಕ ಹಾಗೂ ಸಮಯ ಮತ್ತು ವರದಿ ಸಿಕ್ಕಿದ ದಿನ ಹಾಗೂ ಸಮಯವು ಸರಿಯಾಗಿ ನಮೂದಾಗಿರುವಂತೆ ನೋಡಿಕೊಳ್ಳಬೇಕು ಎಂದು ತಿಳಿಸಿದೆ.

ಕೊರೋನ ಪಾಸಿಟಿವ್ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ದುಬೈ ನಾಗರಿಕ ವಿಮಾನಯಾನ ಪ್ರಾಧಿಕಾರ ಈ ಮುಂಜಾಗೃತಾ ಕ್ರಮಗಳನ್ನು ಕೈಗೊಂಡಿದೆ. ಕೋವಿಡ್ ಹರಡುವುದನ್ನು ತಪ್ಪಿಸಲು ಪ್ರಯಾಣಿಕರು ಸಹಕರಿಸಬೇಕು ಎಂದು ದುಬೈ ನಾಗರಿಕ ವಿಮಾನಯಾನ ಪ್ರಾಧಿಕಾರ ಮನವಿ ಮಾಡಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News