ಉಡುಪಿ: ಸೋಮವಾರ 6,900 ಮಂದಿಯಿಂದ ಲಸಿಕೆ ಸ್ವೀಕಾರ

Update: 2021-04-19 15:18 GMT
ಸಾಂದರ್ಭಿಕ ಚಿತ್ರ

ಉಡುಪಿ, ಎ.19: ಕೊರೋನ ವಿರುದ್ಧದ ಲಭ್ಯವಿರುವ ಲಸಿಕೆಯನ್ನು ಜಿಲ್ಲೆಯಲ್ಲಿ ಇಂದು ಒಟ್ಟು 6,900 ಮಂದಿ ಸ್ವೀಕರಿಸಿದ್ದಾರೆ. ಇವರಲ್ಲಿ 4567 ಮಂದಿ ಲಸಿಕೆಯ ಮೊದಲ ಡೋಸ್ ಪಡೆದರೆ, 2333 ಮಂದಿಗೆ ಎರಡನೇ ಡೋಸ್ ನೀಡಲಾಯಿತು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸುಧೀರ್‌ಚಂದ್ರ ಸೂಡ ತಿಳಿಸಿದ್ದಾರೆ.

 ಇಂದು ಜಿಲ್ಲೆಯಲ್ಲಿ 45 ವರ್ಷ ಮೇಲಿನ ಒಟ್ಟು 6707 ಮಂದಿ ಲಸಿಕೆಯನ್ನು ಸ್ವೀಕರಿಸಿದ್ದು, ಇವರಲ್ಲಿ 4522 ಮಂದಿ ಮೊದಲ ಡೋಸ್‌ನ್ನೂ, 2185 ಮಂದಿ ಎರಡನೇ ಡೋಸ್‌ನ್ನು ಪಡೆದಿದ್ದಾರೆ. 175 ಮಂದಿ ಆರೋಗ್ಯ ಕಾರ್ಯಕರ್ತರು ಹಾಗೂ 18 ಮಂದಿ ಕೊರೋನ ಮುಂಚೂಣಿ ಯೋಧರು ಸಹ ಇಂದು ಲಸಿಕೆ ಸ್ವೀಕರಿಸಿದವರಲ್ಲಿ ಸೇರಿದ್ದಾರೆ ಎಂದವರು ಹೇಳಿದರು.

  ಜಿಲ್ಲೆಯಲ್ಲಿ ಇದುವರೆಗೆ 1,67,294 ಮಂದಿ ಲಸಿಕೆಯ ಮೊದಲ ಡೋಸ್‌ನ್ನು ಪಡೆದರೆ, 30,289 ಮಂದಿ ಎರಡನೇ ಡೋಸ್‌ನ್ನು ಸ್ವೀಕರಿಸಿದ್ದಾರೆ ಎಂದು ಡಾ.ಸೂಡ ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News