ಬೆಂಗಳೂರು ಸೇರಿ ರಾಜ್ಯಾದ್ಯಂತ 4 ದಿನ ಸಾಧಾರಣ ಮಳೆ ಸಾಧ್ಯತೆ: ಹವಾಮಾನ ಇಲಾಖೆ ಮುನ್ಸೂಚನೆ

Update: 2021-04-19 15:27 GMT

ಬೆಂಗಳೂರು, ಎ.19: ರಾಜ್ಯದಲ್ಲಿ ಬಹುತೇಕ ಎಲ್ಲ ಕಡೆಗಳಲ್ಲಿ ಮುಂದಿನ ನಾಲ್ಕು ದಿನ ಹಗುರದಿಂದ ಸಾಧಾರಣ ಮಳೆ ಸುರಿಯಲಿದೆ. ರಾಜಧಾನಿ ಬೆಂಗಳೂರಿನಲ್ಲಿ ಕೂಡ ಮಳೆ ಸುರಿಯುವ ಲಕ್ಷಣಗಳಿವೆ ಎಂದು ರಾಜ್ಯ ಹವಾಮಾನ ಇಲಾಖೆ ನಿರ್ದೇಶಕರು ತಿಳಿಸಿದ್ದಾರೆ.

ಮುಂದಿನ ನಾಲ್ಕು ದಿನ ಕರಾವಳಿ ಭಾಗದಲ್ಲಿ, ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡು ಭಾಗಗಳಲ್ಲಿ ಮಳೆ ಸುರಿಯಲಿದೆ. ಎ.18ರಂದು ಶಿರಾಡಿಯಲ್ಲಿ 4 ಸೆಂ,ಮೀ, ಧಾರವಾಡ ಜಿಲ್ಲೆಯ ಕಲಘಟಗಿಯಲ್ಲಿ 3 ಸೆಂ,ಮೀ, ಶಿವಮೊಗ್ಗ ಜಿಲ್ಲೆಯ ತ್ಯಾಗರ್ತಿಯಲ್ಲಿ 4 ಸೆಂ,ಮೀ ಮಳೆಯಾಗಿದೆ.

ರಾಜ್ಯದಲ್ಲಿ ಕಲಬುರಗಿಯಲ್ಲಿ ಅತಿ ಹೆಚ್ಚು ತಾಪಮಾನ 39.7 ಡಿಗ್ರಿ ಸೆಲ್ಸಿಯಸ್, ವಿಜಯಪುರದಲ್ಲಿ 38.4, ರಾಯಚೂರಿನಲ್ಲಿ 39 ಡಿಗ್ರಿ ಸೆಲ್ಸಿಯಸ್, ಕೊಪ್ಪಳದಲ್ಲಿ 37.5 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ. ಬೆಂಗಳೂರಿನಲ್ಲಿ 34.3 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News