ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಬಗ್ಗೆ ಅಗೌರವ: ಕ್ಷೇತ್ರ ಶಿಕ್ಷಣಾಧಿಕಾರಿ ವಿರುದ್ಧ ಬ್ರಹ್ಮಾವರ ಠಾಣೆಗೆ ದೂರು

Update: 2021-04-19 15:51 GMT

ಬ್ರಹ್ಮಾವರ, ಎ.19: ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಬಗ್ಗೆ ಅಗೌರವ ತೋರಿ ಮತ್ತು ಬ್ರಾಹ್ಮಣ ಶ್ರೇಷ್ಠತೆಯನ್ನು ಎತ್ತಿ ಹಿಡಿಯಬೇಕೆಂಬ ದುರುದ್ದೇಶ ದಿಂದ ವಾಟ್ಸಾಪ್ ಸಂದೇಶಗಳನ್ನು ಕಳುಹಿಸಿರುವ ಬ್ರಹ್ಮಾವರ ಕ್ಷೇತ್ರ ಶಿಕ್ಷಣಾಧಿ ಕಾರಿ ವಿರುದ್ಧ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ದೌರ್ಜನ್ಯ ತಡೆ ಕಾಯಿದೆ ಯಡಿ ಎಫ್‌ಐಆರ್ ದಾಖಲಿಸಿ ಸೂಕ್ತ ಕಾನೂನು ಕ್ರಮ ಜರಗಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ವಾದ ಉಡುಪಿ ಜಿಲ್ಲಾ ಪ್ರಧಾನ ಸಂಚಾಲಕ ಸುಂದರ್ ಮಾಸ್ತರ್ ಬ್ರಹ್ಮಾವರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಕ್ಷೇತ್ರ ಶಿಕ್ಷಣಾಧಿಕಾರಿ ಓ.ಆರ್.ಪ್ರಕಾಶ್ ‘ಪ್ರೌಡ್ ಟು ಬಿ ಬ್ರಾಹ್ಮಿನ್’ ಎಂಬ ತಲೆಬರಹದ ಅಡಿಯಲ್ಲಿ ‘ಡಾ.ಬಾಬಾ ಸಾಹೇಬರು ಒಬ್ಬರೇ ಸಂವಿಧಾನವನ್ನು ಬರೆದಿಲ್ಲ, ಬೆನಗಲ್ ನರಸಿಂಹ ರಾವ್‌ರವರು ಸಂವಿಧಾನವನ್ನು ಬರೆದಿರು ವುದು’ ಎಂಬ ವಿಷಯಗಳನ್ನು ಲಿಖಿತ ರೂಪದಲ್ಲಿ ಚರ್ಚಿಸುತ್ತ ಬ್ರಾಹ್ಮಣರೇ ಶ್ರೇಷ್ಠರು ಎಂದು ಪ್ರತಿಪಾದಿಸಲು ಹೊರಟು ಅಂಬೇಡ್ಕರ್‌ಗೆ ಅಗೌರವವನ್ನು ತೋರಿಸಿದ್ದಾರೆ ಎಂದು ದೂರಲಾಗಿದೆ. ಈ ನಿಟ್ಟಿನಲ್ಲಿ ತಮ್ಮ ವಿಚಾರಗಳನ್ನು ಮಂಡಿಸಿ, ನೂರಾರು ಮಂದಿ ಇರುವ ಬ್ರಹ್ಮಾವರ ಕನ್ನಡ ಭಾಷಾ ಶಿಕ್ಷಕರ ವಾಟ್ಸಾಪ್ ಗ್ರೂಪಿನಲ್ಲಿ ಈ ಸಂದೇಶವನ್ನು ಹರಿಯ ಬಿಟ್ಟು, ಇದನ್ನು ಮತ್ತಷ್ಟು ಹಂಚಿ ಎಂಬುದಾಗಿ ತಿಳಿಸಿದ್ದಾರೆ. ತಾನೊಬ್ಬ ಸರಕಾರಿ ನೌಕರ ಎಂಬ ಕನಿಷ್ಟ ಪ್ರಜ್ಞೆ ಇಲ್ಲದೆ ಅಂಬೇಡ್ಕರ್ ಅವರ ಗೌರವಕ್ಕೆ ಮಸಿ ಬಳಿಯುವ ಹಾಗೂ ಅವರ ಚಾರಿತ್ರ, ವಿದ್ವತ್ತಿನ ಅವಹೇಳನ ಮಾಡಿ, ತನ್ನ ಮನೋ ವಿಕೃತಿಯನ್ನು ತಮ್ಮ ಬರಹದ ಉದ್ದಕ್ಕೂ ಬ್ರಾಹ್ಮಣರೇ ಶ್ರೇಷ್ಠ ಎಂದು ಪ್ರತಿಪಾದಿಸಿದ್ದಾರೆ. ಇದು ಇಡೀ ಶಿಕ್ಷಕ ಸಮುದಾಯಕ್ಕೆ ತಪ್ಪು ಸಂದೇಶ ವನ್ನು ರವಾನೆ ಮಾಡುವ ಹುನ್ನಾರ ಹೊಂದಿದೆ ಎಂದು ದೂರಿನಲ್ಲಿ ತಿಳಿಸ ಲಾಗಿದೆ.

ಈ ಸಂದರ್ಭದಲ್ಲಿ ದಲಿತ ಚಿಂತಕ ನಾರಾಯಣ ಮಣೂರು, ದಸಂಸ ಮುಖಂಡರಾದ ಶ್ಯಾಮ್‌ರಾಜ್ ಬಿರ್ತಿ, ಪರಮೇಶ್ವರ ಉಪ್ಪೂರು ಮೊದಲಾದ ವರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News