ರಾಜ್ಯಪಾಲರಿಂದ ಸರ್ವಪಕ್ಷಗಳ ಸಭೆ: 'ರಾಜ್ಯಪಾಲರ ಆಡಳಿತದ ಮುನ್ಸೂಚನೆ' ಎಂದ ಡಿ.ಕೆ.ಶಿವಕುಮಾರ್

Update: 2021-04-19 16:29 GMT

ಬೆಂಗಳೂರು, ಎ. 19: `ರಾಜ್ಯ ಸರಕಾರ ಈಗಾಗಲೇ ಬೆಂಗಳೂರು ನಗರದ ಸಚಿವರು, ಶಾಸಕರು ಹಾಗೂ ಸಂಸದರ ಸಭೆ ನಡೆಸಿ ಕೋವಿಡ್ ಮಾರ್ಗಸೂಚಿ ಬಿಡುಗಡೆ ಮಾಡಿದೆ. ಈ ಮಾರ್ಗಸೂಚಿ ರೂಪಿಸಿದ ಬಳಿಕ ಸರ್ವಪಕ್ಷ ಸಭೆ ಕರೆದರೆ ಏನು ಪ್ರಯೋಜನ? ನಾಳೆ ರಾಜ್ಯಪಾಲರು ಸರ್ವಪಕ್ಷಗಳೊಂದಿಗೆ ಮಾತನಾಡಲಿದ್ದಾರೆ. ಇದು ರಾಜ್ಯದಲ್ಲಿ ರಾಜ್ಯಪಾಲರ ಆಡಳಿತ ಬರುವ ಮುನ್ಸೂಚನೆ ಇರಬಹುದು' ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಇಂದಿಲ್ಲಿ ಸಂಶಯ ವ್ಯಕ್ತಪಡಿಸಿದ್ದಾರೆ.

ಸೋಮವಾರ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಕೋವಿಡ್ ನಿರ್ವಹಣೆಯಲ್ಲಿ ರಾಜ್ಯ ಸರಕಾರ ಸಂಪೂರ್ಣ ವಿಫಲವಾಗಿದೆ. ಸೋಂಕಿತರಿಗೆ ಹಾಸಿಗೆ ವ್ಯವಸ್ಥೆ ಕಲ್ಪಿಸಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ಕಾಂಗ್ರೆಸ್ ಕಚೇರಿಗೆ ಜನರು ಕರೆ ಮಾಡುತ್ತಿದ್ದಾರೆ. ಆ ಹಿನ್ನೆಲೆಯಲ್ಲಿ ಜನಸಾಮಾನ್ಯರಿಗೆ ನೆರವು ನೀಡಲು ಕೆಪಿಸಿಸಿ ವೈದ್ಯಕೀಯ ಘಟಕ ವತಿಯಿಂದ ಸಹಾಯವಾಣಿ ಆರಂಭಿಸಲಾಗುತ್ತಿದೆ ಎಂದು ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News