ಜಾಲತಾಣಗಳಲ್ಲಿ ಹರಿದಾಡುತ್ತಿರುವ ಕೋವಿಡ್ ಮಾರ್ಗಸೂಚಿ ನಕಲಿ: ಸರಕಾರದ ಮುಖ್ಯ ಕಾರ್ಯದರ್ಶಿ ಸ್ಪಷ್ಟನೆ

Update: 2021-04-19 16:51 GMT

ಬೆಂಗಳೂರು, ಎ.19: ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಕೋವಿಡ್ ಮಾರ್ಗಸೂಚಿ ಬಗ್ಗೆ ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್ ಸ್ಪಷ್ಟನೆ ನೀಡಿದ್ದು, ಮಾರ್ಗಸೂಚಿ ನಕಲಿ ಎಂದು ತಿಳಿಸಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಕೋವಿಡ್ ಮಾರ್ಗಸೂಚಿ ನಕಲಿಯಾಗಿದ್ದು ರಾಜ್ಯ ಸರಕಾರ ಆ ರೀತಿಯ ಯಾವುದೇ ಮಾರ್ಗಸೂಚಿಯನ್ನು ಹೊರಡಿಸಿಲ್ಲ. ವಿಪಕ್ಷ ನಾಯಕರು, ರಾಜ್ಯಪಾಲರು ಹಾಗೂ ಮುಖ್ಯಮಂತ್ರಿಗಳ ನೇತೃತ್ವದಲ್ಲಿ ನಾಳೆ(ಎ.20) ಸಭೆ ನಡೆಯಲಿದ್ದು, ಆ ಸಭೆಯ ಬಳಿಕ ಹೊಸ ಮಾರ್ಗಸೂಚಿ ಅಥವಾ ಹೊಸ ನಿಯಮವನ್ನು ರೂಪಿಸುವ ಕುರಿತು ಮುಖ್ಯಮಂತ್ರಿಗಳು ತೀರ್ಮಾನಿಸಲಿದ್ದಾರೆ ಎಂದು ಸ್ಪಷ್ಟಪಡಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News