120ಕ್ಕೂ ಹೆಚ್ಚಿನ ಪೊಲೀಸರಿಗೆ ಸೋಂಕು: ಕರ್ತವ್ಯಕ್ಕೆ ಹಾಜರಾಗಲು ಪೊಲೀಸರು ಹಿಂದೇಟು ?

Update: 2021-04-19 16:52 GMT
ಸಾಂದರ್ಭಿಕ ಚಿತ್ರ

ಬೆಂಗಳೂರು, ಎ.19: ಕೋವಿಡ್ ಸೋಂಕು ಮಿತಿ ಮೀರಿ ಹರಡುತ್ತಿರುವ ಹಿನ್ನೆಲೆ ರಾಜ್ಯದ ಪೊಲೀಸ್ ಇಲಾಖೆಯ ಹಲವು ಸಿಬ್ಬಂದಿ ಕರ್ತವ್ಯಕ್ಕೆ ಹಾಜರಾಗಲು, ಕೆಲಸ ನಿರ್ವಹಿಸಲು ಹಿಂದೇಟು ಹಾಕುತ್ತಿದ್ದಾರೆ ಎಂದು ವರದಿಯಾಗಿದೆ.

ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದೆಲ್ಲೆಡೆ 120ಕ್ಕೂ ಹೆಚ್ಚು ಪೊಲೀಸರಲ್ಲಿ ಕೋವಿಡ್ ಸೋಂಕು ಕಾಣಿಸಿಕೊಂಡಿದೆ. ಇನ್ನು ಪ್ರಾಥಮಿಕ ಮತ್ತು ದ್ವಿತೀಯ ಸಂಪರ್ಕದಲ್ಲಿರುವ ಪೊಲೀಸರಿಗೆ ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದ್ದು, ಸದ್ಯಕ್ಕೆ ಅವರು ಕರ್ತವ್ಯಕ್ಕೆ ಹಾಜರಾಗಲು ಹಿಂಜರಿಯುತ್ತಿದ್ದಾರೆ ಎಂದು ತಿಳಿದುಬಂದಿದೆ.

ಈಗಾಗಲೇ ಪೊಲೀಸ್ ಇಲಾಖೆಯಲ್ಲಿ ಇಬ್ಬರು ಎಎಸ್ಸೈ, ಓರ್ವ ಕಾನ್‍ಸ್ಟೇಬಲ್, ಡಿಜಿ ಕಚೇರಿಯ ಲೆಕ್ಕಾಧಿಕಾರಿ ಕೋವಿಡ್‍ಗೆ ಬಲಿಯಾಗಿದ್ದಾರೆ. ಇನ್ನು, ಇಲಾಖೆಯ ಮಾಹಿತಿ ಪ್ರಕಾರ, ಈಗಾಗಲೇ 15,800 ಸಿಬ್ಬಂದಿ ಕೋವಿಡ್ ಲಸಿಕೆ ಪಡೆದಿದ್ದಾರೆ. ಇವರಲ್ಲಿ 9,700 ಸಿಬ್ಬಂದಿ ಎರಡನೇ ಬಾರಿಯ ಲಸಿಕೆಯನ್ನೂ ಹಾಕಿಸಿಕೊಂಡಿದ್ದಾರೆ. ಆದರೂ ಪಾಸಿಟಿವ್ ಪ್ರಮಾಣ ಮಾತ್ರ ಹೆಚ್ಚಾಗುತ್ತಲೇ ಇದ್ದು, 50 ವರ್ಷ ಮೇಲ್ಪಟ್ಟವರೆ ಹೆಚ್ಚಾಗಿ ಕೋವಿಡ್ ಸೋಂಕಿನಿಂದ ಸಾವನ್ನಪ್ಪುತ್ತಿರುವ ಕುರಿತು ಪೊಲೀಸ್ ಇಲಾಖೆಯ ಆತಂಕಕ್ಕೆ ಕಾರಣವಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News