ದ.ಕ.ಜಿಲ್ಲೆ: 218 ಮಂದಿಗೆ ಕೊರೋನ ಪಾಸಿಟಿವ್

Update: 2021-04-19 17:21 GMT

ಮಂಗಳೂರು, ಎ.19: ದ.ಕ.ಜಿಲ್ಲೆಯಲ್ಲಿ ಸೋಮವಾರ 218 ಮಂದಿಯಲ್ಲಿ ಕೊರೋನ ಪಾಸಿಟಿವ್ ಧೃಢಪಡುವುದರೊಂದಿಗೆ ಜಿಲ್ಲೆಯಲ್ಲಿ ಈವರೆಗೆ 38,361 ಪಾಸಿಟಿವ್ ಪ್ರಕರಣಗಳು ಕಂಡು ಬಂದಿದೆ.

ಸೋಮವಾರ 101 ಮಂದಿ ಚಿಕಿತ್ಸೆ ಪಡೆದು ಬಿಡುಗಡೆಗೊಳ್ಳುವುದರೊಂದಿಗೆ ಈವರೆಗೆ 35,736 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಂತಾಗಿದೆ. ಜಿಲ್ಲೆಯಲ್ಲಿ ಈವರೆಗೆ ಒಟ್ಟು 744 ಮಂದಿ ಕೊರೋನದಿಂದ ಮೃತಪಟ್ಟಿದ್ದಾರೆ.

ಜಿಲ್ಲೆಯಲ್ಲಿ ಈವರೆಗೆ 6,89,794 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿತ್ತು. ಆ ಪೈಕಿ 6,51,433 ಮಂದಿಯ ವರದಿ ನೆಗೆಟಿವ್ ಬಂದಿದೆ. ಅಲ್ಲದೆ 1881 ಸಕ್ರಿಯ ಪ್ರಕರಣವಿದೆ.

ದಂಡ: ಜಿಲ್ಲೆಯಲ್ಲಿ ಮಾಸ್ಕ್ ಧರಿಸದೆ ಓಡಾಡುತ್ತಿದ್ದುದಕ್ಕೆ ಸಂಬಂಧಿಸಿ ಈವರೆಗೆ 46,318 ಪ್ರಕರಣ ದಾಖಲಿಸಿ, 48,06,830 ರೂ. ದಂಡ ವಸೂಲಿ ಮಾಡಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News