ಬೀದರ್: ಮಾಜಿ ಶಾಸಕ ಸೈಯದ್ ಝುಲ್ಫಿಕರ್‌ ಹಾಶ್ಮಿ ನಿಧನ

Update: 2021-04-20 11:32 GMT

ಬೀದರ್, ಎ. 20: ಮಾಜಿ ಶಾಸಕ ಜುಲ್ಫಿಕರ್ ಹಾಸ್ಮಿ(57) ಅವರು ಮೂತ್ರಪಿಂಡ ವೈಫಲ್ಯದ ಹಿನ್ನೆಲೆಯಲ್ಲಿ ಮಂಗಳವಾರ ಬೆಳಗಿನಜಾವ ಹೈದರಾಬಾದ್‍ನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಪತ್ನಿ, ಮೂವರು ಪುತ್ರರು ಹಾಗೂ ಇಬ್ಬರು ಪುತ್ರಿಯರು ಸೇರಿದಂತೆ ಅಪಾರ ಸಂಖ್ಯೆ ಅಭಿಮಾನಿಗಳನ್ನು ಶ್ರೀಯುತರು ಅಗಲಿದ್ದಾರೆ. ನಾಲ್ಕು ತಿಂಗಳಿಂದ ಡಯಾಲಿಸಿಸ್ ಮಾಡಿಸಿಕೊಳ್ಳುತ್ತಿದ್ದರು. ಎರಡು ದಿನಗಳ ಹಿಂದೆ ಆರೋಗ್ಯದಲ್ಲಿ ಏರುಪೇರಾದ ಕಾರಣ ಅವರನ್ನು ಹೈದರಾಬಾದ್‍ನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದಾರೆ ಎಂದು ವೈದ್ಯಕೀಯ ಮೂಲಗಳು ತಿಳಿಸಿವೆ.

ನಗರದ ಜಾಮಾ ಮಸೀದಿಯಲ್ಲಿ ಇಂದು (ಮಂಗಳವಾರ) ಮಧ್ಯಾಹ್ನ 1.30 ಗಂಟೆಗೆ ವಿಶೇಷ ಪ್ರಾರ್ಥನೆ ಆಯೋಜಿಸಲಾಗಿದೆ. ಬೀದರ್ ತಾಲೂಕಿನ ಅಷ್ಟೂರಿನ ಹಾಸ್ಮಿ ಅವರ ಜಮೀನಿನಲ್ಲಿ ಅಂತ್ಯಸಂಸ್ಕಾರ ನಡೆಸಲಾಯಿತು ಎಂದು ಕುಟುಂಬ ಮೂಲಗಳು ತಿಳಿಸಿವೆ.

ಹಾಸ್ಮಿ ಅವರು 1994ರಲ್ಲಿ ಬಿಎಸ್ಪಿಯಿಂದ ಬೀದರ್ ಕ್ಷೇತ್ರದಿಂದ ವಿಧಾನಸಭೆಗೆ ಆಯ್ಕೆಯಾಗಿದ್ದರು. ದಕ್ಷಿಣ ಭಾರತದಲ್ಲಿ ಮೊಟ್ಟ ಮೊದಲ ಬಾರಿಗೆ ಬಿಎಸ್ಪಿ ಖಾತೆ ತೆರೆದ ಮೊದಲ ವ್ಯಕ್ತಿ ಎನ್ನುವ ಶ್ರೇಯಸ್ಸಿಗೆ ಜುಲ್ಫಿಕರ್ ಹಾಸ್ಮಿ ಪಾತ್ರರಾಗಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News