ಶಾಲಾ ಬೇಸಿಗೆ ರಜೆ, ಮುಂದಿನ ಶೈಕ್ಷಣಿಕ ವರ್ಷಾರಂಭದ ದಿನಾಂಕ ಪ್ರಕಟ

Update: 2021-04-20 11:51 GMT
ಸಾಂದರ್ಭಿಕ ಚಿತ್ರ (PTI photo)

ಬೆಂಗಳೂರು, ಎ.20: ಶಿಕ್ಷಣ ಇಲಾಖೆ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಬೇಸಿಗೆ ರಜೆ ಪ್ರಕಟಿಸಿದ್ದು, 1ನೇ ತರಗತಿಯಿಂದ 7, 8 ನೇ ತರಗತಿಗಳಿರುವ ಪ್ರಾಥಮಿಕ ಶಾಲೆಗಳಿಗೆ ಮೇ 1ರಿಂದ ಜೂ.14ರವರೆಗೆ ಬೇಸಿಗೆ ರಜೆ. ಹಾಗೂ ಜೂ.15ರಿಂದ 2021-22ನೇ ಸಾಲಿನ ಶೈಕ್ಷಣಿಕ ವರ್ಷ ಆರಂಭವಾಗಲಿದೆ ಎಂದು ಶಿಕ್ಷಣ ಸಚಿವ ಸುರೇಶ್‍ ಕುಮಾರ್ ತಿಳಿಸಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, 8 ಮತ್ತು 9ನೇ ತರಗತಿಯ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಮೇ 1ರಿಂದ ಜುಲೈ 14ರವರೆಗೆ ಬೇಸಿಗೆ ರಜೆ ಇರುತ್ತದೆ. ಪ್ರೌಢಶಾಲೆಗಳ ಶಿಕ್ಷಕರಿಗೆ ಜೂ.15ರಿಂದ ಜುಲೈ 14ರವರೆಗೆ ಬೇಸಿಗೆ ರಜೆ. ಜೂ.21ರಿಂದ ಜು.5ರವರೆಗೆ ಎಸೆಸೆಲ್ಸಿ ಪರೀಕ್ಷೆಗಳು ನಡೆಯುತ್ತವೆ. ಜು.15ರಿಂದ 2021-22ನೇ ಸಾಲಿನ ಶೈಕ್ಷಣಿಕ ವರ್ಷ ಆರಂಭವಾಗಲಿದೆ ಎಂದು ಮಾಹಿತಿ ನೀಡಿದ್ದಾರೆ.

ಸೂಚನೆ: ಶಾಲೆಗಳ ರಜೆ ವೇಳಾಪಟ್ಟಿಯು ತಾತ್ಕಾಲಿಕವಾಗಿದ್ದು, ಕೋವಿಡ್ ಹಿನ್ನೆಲೆಯಲ್ಲಿ ಸರಕಾರ ಇಲಾಖೆ ಮತ್ತು ಜಿಲ್ಲಾಡಳಿತಗಳು ನೀಡುವ ಸೂಚನೆ ಮತ್ತು ನಿರ್ದೇಶನಗಳನ್ನು ಪಾಲಿಸುವುದು ಕಡ್ಡಾಯವಾಗಿದೆ ಎಂದು ಅವರು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News