ರಾಜ್ಯದಲ್ಲಿ 15 ದಿನ ಲಾಕ್‌ಡೌನ್ ಮಾಡಿ: ರಾಜ್ಯಪಾಲರ ನೇತೃತ್ವದ ಸರ್ವಪಕ್ಷ ಸಭೆಯಲ್ಲಿ ಕುಮಾರಸ್ವಾಮಿ ಮನವಿ

Update: 2021-04-20 12:22 GMT

ಬೆಂಗಳೂರು, ಎ.20: ರಾಜ್ಯದಲ್ಲಿ ಕೋವಿಡ್‌ ಎರಡನೇ ಅಲೆ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರಾಜ್ಯಪಾಲ ವಜುಭಾಯಿ ವಾಲಾ ನೇತೃತ್ವದಲ್ಲಿ ಆಡಳಿತ-ವಿರೋಧ ಪಕ್ಷಗಳ ನಾಯಕರ ವರ್ಚುವಲ್‌ ಸಭೆ ನಡೆಯಿತು. ಮುಖ್ಯಮಂತ್ರಿ ಯಡಿಯೂರಪ್ಪ ಅವರು ಆಸ್ಪತ್ರೆಯಿಂದಲೇ ಸಭೆಯಲ್ಲಿ  ಭಾಗವಹಿಸಿದರು.

ಸಭೆಯಲ್ಲಿ ಆರೋಗ್ಯ ಸಚಿವ ಡಾ.ಸುಧಾಕರ್ ಅವರು ಕೊರೋನದ ಈಗಿನ ಸ್ಥಿತಿಯ ಬಗ್ಗೆ ಹಾಗೂ ಸೋಂಕು ನಿಯಂತ್ರಣಕ್ಕೆ ರಾಜ್ಯ ಸರಕಾರ ಕೈಗೊಂಡ ಕ್ರಮಗಳ ಬಗ್ಗೆ ವಿವರಿಸಿದರು.

'ಲಾಕ್ಡೌನ್ ಜಾರಿ ಮಾಡಿದರೆ ಯಾವುದೇ ಪ್ರಯೋಜನ ಇಲ್ಲ. ಇದರಿಂದ ಬಡವರಿಗೆ ತೊಂದರೆ ಆಗಲಿದೆ' ಎಂದು ಶಾಸಕ ಹೆಚ್.ಡಿ ರೇವಣ್ಣ ವಿವರಿಸಿದರು. 

ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ರಾಜ್ಯದಲ್ಲಿ ಲಾಕ್‌ಡೌನ್ ಮಾಡುವಂತೆ ಮನವಿ ಮಾಡಿದರು. 15 ದಿನಗಳ ಕಾಲ ಲಾಕ್‌ಡೌನ್ ಮಾಡಿ. ಬಡವರಿಗೆ 1 ತಿಂಗಳು ಆರ್ಥಿಕ ಸಹಾಯ ಮಾಡಿ ಎಂದು ತಿಳಿಸಿದರು.

ಸಭೆಯಲ್ಲಿ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ವಿಧಾನ ಪರಿಷತ್‌ ವಿರೋಧ ಪಕ್ಷದ ನಾಯಕ ಎಸ್‌.ಆರ್‌. ಪಾಟೀಲ್, ಬಿಜೆಪಿ ರಾಜ್ಯ ಅಧ್ಯಕ್ಷ ನಳಿನ್‌ಕುಮಾರ್‌ ಕಟೀಲು, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌, ಸಚಿವರಾದ ಬಸವರಾಜ ಬೊಮ್ಮಾಯಿ, ಡಾ.ಸುಧಾಕರ್, ಆರ್.ಅಶೋಕ್, ಡಿಸಿಎಂ ಡಾ.ಅಶ್ವತ್ಥ ನಾರಾಯಣ, ಶಾಸಕ ಜಿ.ಪರಮೇಶ್ವರ್‌ ಸೇರಿ ಹಲವರು ಭಾಗವಹಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News