ರಾಜ್ಯಪಾಲರು ಈ ಸಭೆ ಕರೆದಿರುವುದು ಸಂವಿಧಾನ ಬಾಹಿರ: ಸರ್ವಪಕ್ಷ ಸಭೆಯಲ್ಲಿ ಸಿದ್ದರಾಮಯ್ಯ

Update: 2021-04-20 12:52 GMT

ಬೆಂಗಳೂರು, ಎ.20: ರಾಜ್ಯದಲ್ಲಿ ಕೋವಿಡ್‌ ಎರಡನೇ ಅಲೆ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರಾಜ್ಯಪಾಲ ವಜುಭಾಯಿ ವಾಲಾ ನೇತೃತ್ವದಲ್ಲಿ ಸರ್ವಪಕ್ಷ ಸಭೆ ನಡೆಯುತ್ತಿದ್ದು, 'ರಾಜ್ಯಪಾಲರು ಈ ಸಭೆ ಕರೆದಿರುವುದು ಸಂವಿಧಾನ ಬಾಹಿರ' ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಸಭೆಯಲ್ಲಿ ಆರೋಗ್ಯ ಸಚಿವ ಡಾ.ಸುಧಾಕರ್ ಅವರು ಕೊರೋನದ ಈಗಿನ ಸ್ಥಿತಿಯ ಬಗ್ಗೆ ಹಾಗೂ ಸೋಂಕು ನಿಯಂತ್ರಣಕ್ಕೆ ರಾಜ್ಯ ಸರಕಾರ ಕೈಗೊಂಡ ಕ್ರಮಗಳ ಬಗ್ಗೆ ವಿವರಿಸಿದರು. ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ರಾಜ್ಯದಲ್ಲಿ ಲಾಕ್‌ಡೌನ್ ಮಾಡುವಂತೆ ಮನವಿ ಮಾಡಿದರು. 15 ದಿನಗಳ ಕಾಲ ಲಾಕ್‌ಡೌನ್ ಮಾಡಿ. ಬಡವರಿಗೆ 1 ತಿಂಗಳು ಆರ್ಥಿಕ ಸಹಾಯ ಮಾಡಿ ಎಂದು ತಿಳಿಸಿದರು.

ನಂತರ ಮಾತನಾಡಿದ ಸಿದ್ದರಾಮಯ್ಯ, ರಾಜ್ಯಪಾಲರು ಈ ಸಭೆ ಕರೆದಿರುವುದು ಸಂವಿಧಾನ ಬಾಹಿರ. ಆಡಳಿತದಲ್ಲಿ ರಾಜ್ಯಪಾಲರ ಹಸ್ತಕ್ಷೇಪ ಸರಿಯಲ್ಲ. ಇದು ಕಾನೂನು ಬಾಹಿರ ಆದರೆ ರಾಜ್ಯಪಾಲರಿಗೆ ಗೌರವ ನೀಡಲು ಸಭೆಯಲ್ಲಿ ಭಾಗವಹಿಸಿದ್ದೇವೆ ಎಂದು ತಿಳಿಸಿದರು.

ನವೆಂಬರ್ ತಿಂಗಳಲ್ಲೇ ಕೊರೋನದ ಬಗ್ಗೆ ತಜ್ಞರು ವರದಿ ನೀಡಿದ್ದಾರೆ. ಆದರೆ ತಜ್ಞರ ವರದಿಯನ್ನು ಸರಕಾರ ಗಂಭೀರವಾಗಿ ಪರಿಗಣಿಸಿಲ್ಲ. ಇದರ ಬಗ್ಗೆ ಮೊದಲೇ ಗಮನವಹಿಸಿದ್ದರೆ ರಾಜ್ಯದಲ್ಲಿ ಈ ಪರಿಸ್ಥಿರಿ ಬರುತ್ತಿರಲಿಲ್ಲ ಎಂದು ಸಿದ್ದರಾಮಯ್ಯ ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News