ರಾಜ್ಯದಲ್ಲಿ ಲಾಕ್‌ಡೌನ್ ಬಗ್ಗೆ ಚರ್ಚಿಸಿ ನಿರ್ಧಾರ: ಮುಖ್ಯಮಂತ್ರಿ ಯಡಿಯೂರಪ್ಪ

Update: 2021-04-20 14:18 GMT

ಬೆಂಗಳೂರು, ಎ.20: ರಾಜ್ಯದಲ್ಲಿ ಕೋವಿಡ್‌ ಎರಡನೇ ಅಲೆ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರಾಜ್ಯಪಾಲ ವಜುಭಾಯಿ ವಾಲಾ ನೇತೃತ್ವದಲ್ಲಿ ಆಡಳಿತ-ವಿರೋಧ ಪಕ್ಷಗಳ ನಾಯಕರ ವರ್ಚುವಲ್‌ ಸಭೆ ನಡೆಯಿತು. ಮುಖ್ಯಮಂತ್ರಿ ಯಡಿಯೂರಪ್ಪ ಅವರು ಆಸ್ಪತ್ರೆಯಿಂದಲೇ ಸಭೆಯಲ್ಲಿ ಭಾಗವಹಿಸಿದರು.

ಸಭೆಯಲ್ಲಿ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಲಾಕ್‌ಡೌನ್ ಮಾಡುವಂತೆ ಮನವಿ ಮಾಡಿದರು. ಬಳಿಕ ಮಾತನಾಡಿದ ಮುಖ್ಯಮಂತ್ರಿ ಯಡಿಯೂರಪ್ಪ ರಾಜ್ಯದಲ್ಲಿ ಲಾಕ್‌ಡೌನ್ ಬಗ್ಗೆ ಚರ್ಚಿಸಿ ನಿರ್ಧಾರ ಕೈಗೊಳ್ಳುತ್ತೇನೆ ಎಂದು ತಿಳಿಸಿದರು.

'ಕುಮಾರಸ್ವಾಮಿ, ಸಿದ್ದರಾಮಯ್ಯ ಸಲಹೆ ಕೊಟ್ಟಿದ್ದಾರೆ. ಅವರ ಸಲಹೆಗಳನ್ನು ಪರಿಗಣಿಸುತ್ತೇವೆ. ಈ ಬಗ್ಗೆ ಚರ್ಚಿಸಿ ನಿರ್ಧಾರ ಕೈಗೊಳ್ಳುತ್ತೇನೆ. ಜನರಿಗೆ ಕಷ್ಟ ಆದರೂ ಸಹಿಸಿಕೊಳ್ಳಬೇಕು. ರಾಜ್ಯದಲ್ಲಿ ನಿಷೇಧಾಜ್ಞೆ ಬಗ್ಗೆಯೂ ಚರ್ಚೆ ಮಾಡುತ್ತೇನೆ ಎಂದು ಯಡಿಯೂರಪ್ಪ ತಿಳಿಸಿದರು. 

ಇದಕ್ಕೂ ಮೊದಲು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ರಾಜ್ಯದಲ್ಲಿ ಲಾಕ್‌ಡೌನ್ ಮಾಡುವಂತೆ ಮನವಿ ಮಾಡಿದ್ದರು. 15 ದಿನಗಳ ಕಾಲ ಲಾಕ್‌ಡೌನ್ ಮಾಡಿ. ಬಡವರಿಗೆ 1 ತಿಂಗಳು ಆರ್ಥಿಕ ಸಹಾಯ ಮಾಡಿ ಎಂದು ತಿಳಿಸಿದರು.

ಸಭೆಯಲ್ಲಿ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ವಿಧಾನ ಪರಿಷತ್‌ ವಿರೋಧ ಪಕ್ಷದ ನಾಯಕ ಎಸ್‌.ಆರ್‌. ಪಾಟೀಲ್, ಬಿಜೆಪಿ ರಾಜ್ಯ ಅಧ್ಯಕ್ಷ ನಳಿನ್‌ಕುಮಾರ್‌ ಕಟೀಲು, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌, ಸಚಿವರಾದ ಬಸವರಾಜ ಬೊಮ್ಮಾಯಿ, ಡಾ.ಸುಧಾಕರ್, ಆರ್.ಅಶೋಕ್, ಡಿಸಿಎಂ ಡಾ.ಅಶ್ವತ್ಥ ನಾರಾಯಣ, ಶಾಸಕ ಜಿ.ಪರಮೇಶ್ವರ್‌ ಸೇರಿ ಹಲವರು ಭಾಗವಹಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News