ಮಂಗಳೂರು ವಿವಿ: ಎಲ್ಲಾ ಪರೀಕ್ಷೆಗಳು ಮುಂದೂಡಿಕೆ

Update: 2021-04-20 17:49 GMT
ಸಾಂದರ್ಭಿಕ ಚಿತ್ರ

ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯದ ವತಿಯಿಂದ ಎಪ್ರಿಲ್ 21ರಿಂದ ನಿಗದಿಯಾಗಿದ್ದ ಎಲ್ಲಾ ಪರೀಕ್ಷೆಗಳನ್ನು ಮುಂದಿನ ನಿರ್ಧಾರದವರೆಗೆ ಮುಂದೂಡಲಾಗಿದೆ ಎಂದು ಮಂಗಳೂರು ವಿವಿ ರಿಜಿಸ್ಟ್ರಾರ್ ಪ್ರೊ.ಪಿ.ಎಲ್. ಧರ್ಮ ತಿಳಿಸಿದ್ದಾರೆ.

ಮಂಗಳೂರು ವಿಶ್ವವಿದ್ಯಾನಿಲಯಕ್ಕೊಳಪಡುವ ವಿವಿಧ ಪದವಿ ಕಾಲೇಜುಗಳಲ್ಲಿ ವಿವಿಧ ವಿಭಾಗಗಳ ಪರೀಕ್ಷೆಗಳು ನಡೆಯುತ್ತಿದ್ದು, ಮೇ 8ರವರೆಗೆ ವಿವಿಧ ಪರೀಕ್ಷೆಗಳು ನಿಗದಿಯಾಗಿದ್ದವು. ರಾಜ್ಯ ಸರಕಾರದ ಆದೇಶದ ಮೇರೆಗೆ ಪರೀಕ್ಷೆಗಳನ್ನು ಮುಂದಿನ ನಿರ್ಧಾರದವರೆಗೆ ನಡೆಸದಂತೆ ಕಾಲೇಜುಗಳ ಪ್ರಾಂಶುಪಾಲರಿಗೆ ಪ್ರೊ. ಧರ್ಮ ಮನವಿ ಮಾಡಿದ್ದಾರೆ.

ಸರಕಾರದ ಸೂಚನೆಯಂತೆ ಪುನರ್ ನಿಗದಿಪಡಿಸಿದ ಪರೀಕ್ಷಾ ದಿನಾಂಕಗಳನ್ನು ಪ್ರಕಟಿಸಲಾಗುವುದು ಎಂದು ಅವರು ಹೇಳಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News