ಫೆಲೋಶಿಪ್ ಕಡಿತಗೊಳಿಸಿದ ಆದೇಶ ಹಿಂಪಡೆದ ರಾಜ್ಯ ಸರಕಾರ: ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಸ್ವಾಗತ

Update: 2021-04-20 18:16 GMT

ಮಂಗಳೂರು, ಎ.20: ರಾಜ್ಯ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯ ವತಿಯಿಂದ ಪಿಎಚ್‌ಡಿ/ಎಂಫಿಲ್ ಮಾಡುವ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ನೀಡುವ ಫೆಲೋಶಿಪ್‌ನ್ನು ಕಡಿತಗೊಳಿಸಿದ್ದ ಆದೇಶವನ್ನು ರಾಜ್ಯ ಸರಕಾರ ವಾಪಸ್ ಪಡೆದಿದೆ.

ರಾಜ್ಯ ಸರಕಾರ ಕಡಿತಗೊಳಿಸಿ ಆದೇಶ ಹೊರಡಿಸಿದಾಗ ಇದರ ವಿರುದ್ಧ ರಾಜ್ಯಾದ್ಯಂತ ಕ್ಯಾಂಪಸ್ ಫ್ರಂಟ್ ಹಲವು ರೀತಿಯ ಹೋರಾಟ ನಡೆಸಿ ರಾಜ್ಯ ಸರಕಾರದ ವಿದ್ಯಾರ್ಥಿ ವಿರೋಧಿ ಕ್ರಮದ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿತ್ತು.

ಸಂಶೋಧನಾ ವಿದ್ಯಾರ್ಥಿಗಳು ವಿದ್ಯಾಭ್ಯಾಸಕ್ಕಾಗಿ ಹಲವು ರೀತಿಯ ಅಡೆತಡೆಗಳನ್ನು ಎದುರಿಸಿಕೊಂಡು ಸಮಾಜಕ್ಕೆ ತನ್ನದೇ ಆದ ಸೃಜನಶೀಲ ವಿಚಾರಗಳ ಮೂಲಕ ಹಲವು ಸಮಾಜಮುಖಿ ಬದಲಾವಣೆಗಳಿಗೆ ಕಾರಣರಾಗಿದ್ದಾರೆ. ಸಂಶೋಧನಾ ವಿದ್ಯಾರ್ಥಿಗಳ ಶೈಕ್ಷಣಿಕ ಬೆಳವಣಿಗೆಗೆ ಪೂರಕವಾದ ಯೋಜನೆಗಳನ್ನು ರೂಪಿಸುವುದು ಸರಕಾರದ ಜವಾಬ್ದಾರಿಯಾಗಿದೆ. ಈ ಹಿಂದೆ ಫೆಲೋಶಿಪ್ ಕಡಿತಗೊಳಿಸಿ ಅದೇಶಿಸಿದ್ದ ರಾಜ್ಯ ಸರಕಾರ ಇದೀಗ ಅದನ್ನು ರದ್ದುಗೊಳಿಸಿರುವುದು ಸ್ವಾಗತಾರ್ಹ ಎಂದು ಸಿಎಫ್‌ಐ ರಾಜ್ಯ ಕೋಶಾಧಿಕಾರಿ ಸವಾದ್ ಕಲ್ಲರ್ಪೆ ಹೇಳಿಕೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News