ಆಕ್ಸಿಜನ್, ರೆಮಿಡಿಸಿವಿರ್ ಪೂರೈಕೆಗೆ 24/7 ವಾರ್ ರೂಮ್ ಸ್ಥಾಪನೆ: ಸಚಿವ ಡಾ.ಸುಧಾಕರ್

Update: 2021-04-21 07:27 GMT

ಬೆಂಗಳೂರು, ಎ.21: ಕೊರೋನ ಸಂಪರ್ಕ ಕೊಂಡಿ ಮುರಿಯಲು 14 ದಿನಗಳು ಬೇಕು. ಹೀಗಾಗಿ 14 ದಿನ ಸರಕಾರದಿಂದ ಕಠಿಣ ಕ್ರಮ ಕೈಗೊಳ್ಳಲಾಗಿದೆ. ರಾಜ್ಯದ ಜನರು ಕಡ್ಡಾಯವಾಗಿ ಮಾರ್ಗಸೂಚಿ ಪಾಲಿಸಬೇಕು ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಮನವಿ ಮಾಡಿಕೊಂಡಿದ್ದಾರೆ.

ಬುಧವಾರ ನಗರದಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಡಾ.ಕೆ.ಸುಧಾಕರ್, ಕೊರೋನ ಎರಡನೇ ಅಲೆ ವೇಗವಾಗಿ ಹರಡುತ್ತಿದೆ. ಶೇ.95ರಷ್ಟು ಜನರು ಸೋಂಕಿತರಾಗುವ ಸ್ಥಿತಿ ಬರಬಾರದು. ಹೀಗಾಗಿ ಸರಕಾರ ಕೈಗೊಂಡಿರುವ ಮಾರ್ಗಸೂಚಿಯನ್ನು ಜನರು ಕಟ್ಟುನಿಟ್ಟಾಗಿ ಪಾಲನೆ ಮಾಡಬೇಕು ಎಂದು ಹೇಳಿದರು.

ಕೋವಿಡ್ ಸೋಂಕಿತರಿಗೆ ಸೂಕ್ತ ಚಿಕಿತ್ಸೆ ನೀಡಲು ವ್ಯವಸ್ಥೆ ಕಲ್ಪಿಸಲಾಗಿದೆ. ಆಕ್ಸಿಜನ್, ವೆಂಟಿಲೇಟರ್, ಐಸಿಯು ಕೊರತೆಯಾಗದಂತೆ ಕ್ರಮ ಕೈಗೊಳ್ಳಲಾಗಿದೆ. ಖಾಸಗಿ ಆಸ್ಪತ್ರೆಗಳಲ್ಲಿ ಬೆಡ್ ಸಮಸ್ಯೆಯಾಗದಂತೆ ನೋಡಿಕೊಳ್ಳಲಾಗುವುದು. ಇನ್ನು ಸಿಬ್ಬಂದಿಗಳಿಗೆ ಹೆಚ್ಚಿನ ವೇತನ ನೀಡುವ ಬಗ್ಗೆ ಚರ್ಚೆ ನಡೆಸಲಾಗುತ್ತದೆ ಎಂದರು.

ಆಕ್ಸಿಜನ್ ಮತ್ತು ರೆಮಿಡಿಸಿವಿರ್ ಪೂರೈಕೆಗೆ 24/7 ವಾರ್ ರೂಮ್ ಸ್ಥಾಪಿಸಲಾಗಿದ್ದು, ಸಿಬ್ಬಂದಿಗಳು 3 ಪಾಳಿಗಳಲ್ಲಿ ಕಾರ್ಯನಿರ್ವಹಿಸಲಿದ್ದಾರೆ. ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ಆರು ಸಾವಿರ ಲೀಟರ್‌ ಸಾಮರ್ಥ್ಯದ ಆಮ್ಲಜನಕ ಘಟಕ ಸ್ಥಾಪಿಸಲಾಗಿದ್ದು ಅತೀ ಶೀಘ್ರದಲ್ಲಿ  ಕಾರ್ಯಾರಂಭ ಮಾಡಲಿದೆ

- ಸಚಿವ ಸುಧಾಕರ್ ( ಟ್ವೀಟ್)

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News