×
Ad

'ಉತ್ತರಿಸುವ ಧೈರ್ಯ ತೋರುವಿರಾ?': ಸಿದ್ದರಾಮಯ್ಯಗೆ ಪಂಚ ಪ್ರಶ್ನೆಗಳನ್ನು ಕೇಳಿದ ಬಿಜೆಪಿ

Update: 2021-04-21 19:46 IST

ಬೆಂಗಳೂರು, ಎ.21: ನಮ್ಮ ಪಂಚ ಪ್ರಶ್ನೆಗಳಿಗೆ ಉತ್ತರಿಸುವ ಧೈರ್ಯ ತೋರುವಿರಾ ಸಿದ್ದರಾಮಯ್ಯ? 1. ಕಡಿಮೆ ದರದಲ್ಲಿ ಲಸಿಕೆ ಪೂರೈಕೆ ನೆರವಿನ ಹಸ್ತವಲ್ಲವೇ? 2. ದೇಶಾದ್ಯಂತ ಕೋವಿಡ್ ಲ್ಯಾಬ್ ವ್ಯವಸ್ಥೆ ಮಾಡುತ್ತಿರುವುದು ನೆರವಿನ ಹಸ್ತವಲ್ಲವೇ? 3. ಕೋವಿಡ್ ಸಂದರ್ಭದಲ್ಲೂ ಆರ್ಥಿಕ ಸ್ಥಿತಿ ಪಾತಾಳ ಸೇರದಂತೆ ನೋಡಿದ್ದು ನೆರವಿನ ಹಸ್ತವಲ್ಲವೇ? 4. ದೇಶಾದ್ಯಂತ ಪ್ರಾಥಮಿಕ ಆರೋಗ್ಯ ವ್ಯವಸ್ಥೆ ಸುಧಾರಣೆ ಆರಂಭಿಸಿದ್ದು ನೆರವಿನ ಹಸ್ತವಲ್ಲವೇ? 5. ದೇಶದ ಜನರಲ್ಲಿ ಆತ್ಮವಿಶ್ವಾಸ ಮೂಡಿಸಿದ್ದು ನೆರವಿನ ಹಸ್ತವಲ್ಲವೇ? ಎಂದು ಪ್ರಶ್ನಿಸಿರುವ ಬಿಜೆಪಿ, ಲಸಿಕೆಯ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸಿದ್ದೇ ಕಾಂಗ್ರೆಸ್ ನೀಡಿದ ನೆರವಿನ ಹಸ್ತ, ಜನರನ್ನು ತಪ್ಪುದಾರಿಗೆಳೆದದ್ದೇ ಕಾಂಗ್ರೆಸ್ ಸಾಧನೆ ಎಂದು ಟ್ವೀಟ್ ಮೂಲಕ ಟೀಕಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News