ಬೆಂಗಳೂರು ಮೆಟ್ರೋ ರೈಲು ಯೋಜನೆ: 2ಎ, 2ಬಿ ಹಂತಕ್ಕೆ ಕೇಂದ್ರ ಸಂಪುಟದ ಅನುಮೋದನೆ

Update: 2021-04-21 15:01 GMT

ಹೊಸದಿಲ್ಲಿ, ಎ.22: ಬೆಂಗಳೂರು ಮೆಟ್ರೋ ರೈಲು ಯೋಜನೆಯ 2ಎ ಮತ್ತು 2ಬಿ ಹಂತಕ್ಕೆ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ ಎಂದು ವರದಿಯಾಗಿದೆ.

ಸೆಂಟ್ರಲ್ ಸಿಲ್ಕ್‌ಬೋರ್ಡ್ ಜಂಕ್ಷನ್‌ನಿಂದ ಕೆಆರ್ ಪುರಂವರೆಗಿನ 2ಎ ಹಂತ ಹಾಗೂ ಕೆಆರ್ ಪುರಂನಿಂದ ಹೆಬ್ಬಾಳ ಜಂಕ್ಷನ್ ಮೂಲಕ ವಿಮಾನ ನಿಲ್ದಾಣದವರೆಗಿನ 2 ಬಿ ಹಂತದ ಈ ಯೋಜನೆಯ ಒಟ್ಟು ಉದ್ದ 58.19 ಕಿ.ಮೀ ಆಗಿದ್ದು 14,788.101 ಕೋಟಿ ರೂ. ವೆಚ್ಚವಾಗಲಿದೆ. ಬೆಂಗಳೂರು ನಗರದ ಬೆಳವಣಿಗೆ, ಖಾಸಗಿ ವಾಹನಗಳ ಸಂಖ್ಯೆ ಹೆಚ್ಚಿರುವುದು ಸುಗಮ ಸಂಚಾರ ಮತ್ತು ಸಾರಿಗೆ ವ್ಯವಸ್ಥೆಯ ಮೇಲೆ ಪ್ರತಿಕೂಲ ಪರಿಣಾಮ ಬೀರಿದೆ. ಈ ಹಿನ್ನೆಲೆಯಲ್ಲಿ ಸಾಂಪ್ರದಾಯಿಕ ನಗರ ಸಾರಿಗೆ ವ್ಯವಸ್ಥೆಯ ಹೊಸ ಪರಿಕಲ್ಪನೆಯಾದ ಮೆಟ್ರೋ ರೈಲು ಯೋಜನೆ ಜನರಿಗೆ ಸುರಕ್ಷಿತ, ವಿಶ್ವಾಸಾರ್ಹ ಮತ್ತು ಆರಾಮದಾಯಕ ಪ್ರಯಾಣದ ಅನುಕೂಲ ಒದಗಿಸಲಿದೆ ಎಂದು ಸರಕಾರದ ಹೇಳಿಕೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News