ಉಡುಪಿ : ದಿನದಲ್ಲಿ 2991 ಮಂದಿಯಿಂದ ಲಸಿಕೆ ಸ್ವೀಕಾರ

Update: 2021-04-21 15:13 GMT

ಉಡುಪಿ, ಎ.21: ಕೊರೋನ ವಿರುದ್ಧದ ಲಭ್ಯವಿರುವ ಲಸಿಕೆಯನ್ನು ಜಿಲ್ಲೆಯಲ್ಲಿ ಇಂದು ಒಟ್ಟು 2991 ಮಂದಿ ಸ್ವೀಕರಿಸಿದ್ದಾರೆ. ಇವರಲ್ಲಿ 2033 ಮಂದಿ ಲಸಿಕೆಯ ಮೊದಲ ಡೋಸ್ ಪಡೆದರೆ, 958 ಮಂದಿಗೆ ಎರಡನೇ ಡೋಸ್ ನೀಡಲಾಯಿತು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸುಧೀರ್‌ಚಂದ್ರ ಸೂಡ ತಿಳಿಸಿದ್ದಾರೆ.

ಬುಧವಾರ ಜಿಲ್ಲೆಯಲ್ಲಿ 45 ವರ್ಷ ಮೇಲಿನ ಒಟ್ಟು 2874 ಮಂದಿ ಲಸಿಕೆಯನ್ನು ಸ್ವೀಕರಿಸಿದ್ದು, ಇವರಲ್ಲಿ 1999 ಮಂದಿ ಮೊದಲ ಡೋಸ್‌ನ್ನೂ, 875 ಮಂದಿ ಎರಡನೇ ಡೋಸ್‌ನ್ನು ಪಡೆದಿದ್ದಾರೆ. 84 ಮಂದಿ ಆರೋಗ್ಯ ಕಾರ್ಯಕರ್ತರು ಹಾಗೂ 33 ಮಂದಿ ಕೊರೋನ ಮುಂಚೂಣಿ ಯೋಧರು ಸಹ ಇಂದು ಲಸಿಕೆ ಸ್ವೀಕರಿಸಿದವರಲ್ಲಿ ಸೇರಿದ್ದಾರೆ.

ಜಿಲ್ಲೆಯಲ್ಲಿ ಇದುವರೆಗೆ 1,71,936 ಮಂದಿ ಲಸಿಕೆಯ ಮೊದಲ ಡೋಸ್‌ನ್ನು ಪಡೆದರೆ, 32,606 ಮಂದಿ ಎರಡನೇ ಡೋಸ್‌ನ್ನು ಸ್ವೀಕರಿಸಿದ್ದಾರೆ ಎಂದು ಡಾ.ಸೂಡ ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News