ಸರಕಾರಿ ಉದ್ಯೋಗ ನೀಡುವುದಾಗಿ ನಂಬಿಸಿ ವಂಚನೆ: ಆರೋಪಿ ಸೆರೆ

Update: 2021-04-21 16:34 GMT
ನಿಶಾಂತ್

 ಉಡುಪಿ, ಎ.21: ಸಾಮಾಜಿಕ ಜಾಲತಾಣವಾದ ಫೇಸ್‌ಬುಕ್ ಮೂಲಕ ಸಾರ್ವಜನಿಕರನ್ನು ಸಂಪರ್ಕಿಸಿ, ಸರಕಾರಿ ಉದ್ಯೋಗ ನೀಡುವುದಾಗಿ ನಂಬಿಸಿ, ಹಣ ಮತ್ತು ಲ್ಯಾಪ್‌ಟಾಪ್‌ಗಳನ್ನು ಪಡೆದು ವಂಚಿಸುತ್ತಿದ್ದ ಆರೋಪಿಯನ್ನು ಉಡುಪಿಯ ಸೆನ್ ಪೊಲೀಸರು ಬಂಧಿಸಿದ್ದಾರೆ.

ಕಾಪು ಉಳಿಯಾರಗೋಳಿಯ ನಿಶಾಂತ್ ಎಸ್.ಕುಮಾರ್ ಯಾನೆ ನಿತಿನ್ (21) ಬಂಧಿತ ಆರೋಪಿ. ಬಂಧಿತನಿಂದ ಕೃತ್ಯಕ್ಕೆ ಬಳಸಿದ 7 ಲ್ಯಾಪ್ ಟಾಪ್ ಹಾಗೂ 1 ಮೊಬೈಲ್ ವಶಪಡಿಸಿಕೊಳ್ಳಲಾಗಿದೆ. ಇವುಗಳ ಒಟ್ಟು ಮೌಲ್ಯ 1,50,000ರೂ. ಎಂದು ಅಂದಾಜಿಸಲಾಗಿದೆ.

ಉಡುಪಿ ಎಸ್ಪಿ ವಿಷ್ಣುವರ್ಧನ ನಿರ್ದೇಶನದಲ್ಲಿ, ಹೆಚ್ಚುವರಿ ಎಸ್ಪಿ ಕುಮಾರ ಚಂದ್ರ ಮಾರ್ಗದರ್ಶನದಲ್ಲಿ, ಉಡುಪಿ ಜಿಲ್ಲಾ ಸೆನ್ ಅಪರಾಧ ಪೊಲೀಸ್ ಠಾಣಾ ನಿರೀಕ್ಷಕ ರಾಮಚಂದ್ರ ನಾಯಕ್ ನೇತೃತ್ವದಲ್ಲಿ ಎಎಸ್ಸೈ ಕೇಶವ ಗೌಡ, ಸಿಬ್ಬಂದಿಗಳಾದ ಪ್ರಸನ್ನ, ಜೀವನ್, ರಾಘವೇಂದ್ರ ಹಾಗೂ ಜೀಪು ಚಾಲಕ ನವೀನ್ ಈ ಕಾರ್ಯಾಚರಣೆ ನಡೆಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News