×
Ad

ಕೋವಿಡ್ ಕರ್ತವ್ಯ ನಿರ್ವಹಿಸಲು ಸುತ್ತೋಲೆ

Update: 2021-04-21 22:46 IST

ಬೆಂಗಳೂರು, ಎ. 21: ರಾಜ್ಯದ ವಿವಿಧ ಇಲಾಖೆ, ನಿಗಮ ಮಂಡಳಿ, ಪ್ರಾಧಿಕಾರಗಳ ಶೇ.50ರಷ್ಟು ಅಧಿಕಾರಿ/ಸಿಬ್ಬಂದಿಯನ್ನು ಕರ್ತವ್ಯಕ್ಕೆ, ಉಳಿದ ಶೇ.50ರಷ್ಟು ಸಿಬ್ಬಂದಿಯನ್ನು ಕೋವಿಡ್ ನಿಯಂತ್ರಣ ಕರ್ತವ್ಯಕ್ಕೆ ನಿಯೋಜಿಸುತ್ತಿದ್ದು, ದೃಷ್ಟಿಹೀನ ಹಾಗೂ ಇತರೆ ದೈಹಿಕ ಅಂಗವೈಕಲ್ಯ ಹೊಂದಿರುವ ಸಿಬ್ಬಂದಿ ಮತ್ತು ಗರ್ಭಿಣಿ ಮಹಿಳಾ ಕಚೇರಿ ಹಾಜರಾತಿಗೆ ವಿನಾಯಿತಿ ನೀಡಲಾಗಿದೆ ಎಂದು ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್ ಸುತ್ತೋಲೆ ಹೊರಡಿಸಿದ್ದಾರೆ.

ಆರೋಗ್ಯ, ವೈದ್ಯಕೀಯ ಶಿಕ್ಷಣ, ಒಳಾಡಳಿತ, ಕಂದಾಯ, ಗ್ರಾಮೀಣಾಭಿವೃದ್ಧಿ, ನಗರಾಭಿವೃದ್ಧಿ, ಆಹಾರ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ, ಸಾರಿಗೆ, ಇಂಧನ, ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ, ಆರ್ಥಿಕ, ಪಶುಸಂಗೋಪನೆ, ಅರಣ್ಯ, ಕೃಷಿ, ಕಾರ್ಮಿಕ ಹಾಗೂ ತೋಟಗಾರಿಕೆ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿ/ಸಿಬ್ಬಂದಿಗಳು ಕೇಂದ್ರ ಸ್ಥಾನದಲ್ಲಿ ಲಭ್ಯವಿದ್ದು, ಕೋವಿಡ್ ಕರ್ತವ್ಯಕ್ಕೆ ನಿಯೋಜಿಸಿದಲ್ಲಿ ತಪ್ಪದೆ ಹಾಜರಾಗಿ ಕರ್ತವ್ಯ ನಿರ್ವಹಿಸತಕ್ಕದ್ದು ಎಂದು ರವಿಕುಮಾರ್ ಸುತ್ತೋಲೆಯಲ್ಲಿ ಸೂಚನೆ ನೀಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News