ಶಾಸಕ ಝಮೀರ್‌ ಅಹ್ಮದ್‌ ಖಾನ್‌‌ಗೆ ಕೊರೋನ ಸೋಂಕು

Update: 2021-04-22 09:38 GMT

ಬೆಂಗಳೂರು: ಚಾಮರಾಜಪೇಟೆ ಕ್ಷೇತ್ರದ ಶಾಸಕ ಝಮೀರ್‌ ಅಹ್ಮದ್‌ ಖಾನ್‌ ಅವರಿಗೆ ಕೊರೋನ ಸೋಂಕು ದೃಢಪಟ್ಟಿದೆ.

ಈ ಬಗ್ಗೆ ಟ್ವೀಟ್‌ ಮಾಡಿರುವ ಅವರು, ‘ಸಣ್ಣ ಪ್ರಮಾಣದ ಜ್ವರ ಕಾಣಿಸಿಕೊಂಡ ಕಾರಣ ನಿನ್ನೆ ಕೋವಿಡ್‌ ಪರೀಕ್ಷೆಗೆ ಒಳಗಾಗಿದ್ದೆ. ವರದಿಯಲ್ಲಿ ಪಾಸಿಟಿವ್‌ ಬಂದಿದೆ. ವೈದ್ಯರ ಸಲಹೆ ಮೇರೆಗೆ ಹೋಂ ಕ್ವಾರಂಟೈನ್‌ನಲ್ಲಿ ಇದ್ದೇನೆ’ ಕಳೆದ ಕೆಲವು ದಿನಗಳಿಂದ ನನ್ನ ಸಂಪರ್ಕಕ್ಕೆ ಬಂದವರು ವೈದ್ಯಕೀಯ ಪರೀಕ್ಷೆ ಮಾಡಿಸಿಕೊಳ್ಳಬೇಕೆಂದು ತಮ್ಮಲ್ಲಿ ಮನವಿ ಮಾಡುತ್ತೇನೆ ಎಂದು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News