ಕೊರೋನ ಭೀತಿ; ಹಾಸನ, ಚಿಕ್ಕಮಗಳೂರಿನಲ್ಲಿ ಮೇ 4ರ ವರೆಗೆ ಲಾಕ್‌ಡೌನ್ : ಜಿಲ್ಲಾಧಿಕಾರಿ

Update: 2021-04-22 10:47 GMT

ಹಾಸನ : ಕೊರೋನ ಸೋಂಕು ಹಿನ್ನೆಲೆಯಲ್ಲಿ ಹಾಸನ, ಚಿಕ್ಕಮಗಳೂರಿನಲ್ಲಿ ಲಾಕ್ ಡೌನ್ ಜಾರಿ ಮಾಡಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ. ಅಗತ್ಯ ವಸ್ತುಗಳ ಹೊರತಾಗಿ ಉಳಿದ ಎಲ್ಲಾ ವ್ಯಾಪಾರ, ವಹಿವಾಟು ಬಂದ್ ಮಾಡಲಾಗಿದೆ ಎಂದು ಚಿಕ್ಕಮಗಳೂರು ಡಿಸಿ ರಮೇಶ್ ಹೇಳಿದ್ದಾರೆ.

ಜಿಲ್ಲೆಯಾದ್ಯಂತ ಕಟ್ಟುನಿಟ್ಟಿನ ಆದೇಶ ಜಾರಿ ಮಾಡಲಾಗಿದ್ದು, ಬಟ್ಟೆ ಅಂಗಡಿ, ಎಲೆಕ್ಟ್ರಾನಿಕ್ ಶಾಪ್ ಗಳು ಸೇರಿ ಜೀವನಾವಶ್ಯಕ ಅಲ್ಲದ ಎಲ್ಲಾ ಅಂಗಡಿಗಳ ಬಂದ್ ಮಾಡುವಂತೆ ಆದೇಶಿಸಲಾಗಿದೆ. ದಿನಸಿ, ಹಾಲು, ಮಾಂಸ, ಮೀನು ಮಾರಾಟ ಹಾಗೂ ಕೃಷಿ ಮತ್ತು ಕಟ್ಟಡ ನಿರ್ಮಾಣ ಸಂಬಂಧದ ಅಗತ್ಯ ವಸ್ತುಗಳ ಮಾರಾಟಕ್ಕೆ ಮಾತ್ರವೇ ಅವಕಾಶ ನೀಡಲಾಗಿದೆ ಎಂದು ಹಾಸನ ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಜಿಲ್ಲಾಧಿಕಾರಿಗಳ ಆದೇಶದ ಹಿನ್ನೆಲೆಯಲ್ಲಿ ನಗರಸಭೆಯ ಅಧಿಕಾರಿಗಳು ಅಂಗಡಿಗಳನ್ನು ಬಂದ್ ಮಾಡಿಸುತ್ತಿದ್ದು, ಜಿಲ್ಲಾಧಿಕಾರಿ ಗಳ ಕ್ರಮದಿಂದಾಗಿ ಕಂಗಾಲಾಗಿರುವುದಾಗಿ ವರ್ತಕರು ದೂರಿದ್ದಾರೆ.

ಸರಕಾರದ ಗೈಡ್ ಲೈನ್ ನಂತೆ ಅಂಗಡಿ ಮುಂಗಟ್ಟುಗಳನ್ನು ಮುಚ್ಚಿಸಲಾಗುತ್ತದೆ ಎಂದು ಚಿಕ್ಕಮಗಳೂರು ಜಿಲ್ಲಾಧಿಕಾರಿ ರಮೇಶ್ ಅವರು ತಿಳಿಸಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News