ಅಗತ್ಯ ವಸ್ತುಗಳು ಹೊರತುಪಡಿಸಿ ಉಳಿದೆಲ್ಲಾ ಅಂಗಡಿಗಳು ಬಂದ್: ಪರಿಷ್ಕೃತ ಮಾರ್ಗಸೂಚಿ ಬಿಡುಗಡೆ ಮಾಡಿದ ಸರಕಾರ

Update: 2021-04-22 17:02 GMT

ಬೆಂಗಳೂರು, ಎ. 22: ರಾಜ್ಯದಲ್ಲಿ ಕೊರೋನ ಸೋಂಕಿನ ಎರಡನೆ ಅಲೆ ಏರಿಕೆ ಹಿನ್ನೆಲೆಯಲ್ಲಿ ಮೇ 4ರ ವರೆಗೆ ಅಗತ್ಯ ಸರಕು ಸೇವೆಗಳು ಮತ್ತು ಕಟ್ಟಡ ನಿರ್ಮಾಣ ಸಾಮಗ್ರಿಗಳನ್ನು ಹೊರತುಪಡಿಸಿ ಉಳಿದ ಎಲ್ಲ ಅಂಗಡಿಗಳನ್ನು ಬಂದ್ ಮಾಡುವಂತೆ ರಾಜ್ಯ ಸರಕಾರದ ಆದೇಶ ಹೊರಡಿಸಿದೆ.

ಎ.23ರ ಶುಕ್ರವಾರ ರಾತ್ರಿ 9ಗಂಟೆಯಿಂದ ಸೋಮವಾರ ಬೆಳಗ್ಗೆ 6 ಗಂಟೆಯವರೆಗೆ ವಾರಂತ್ಯದ ಕರ್ಫ್ಯೂ, ಉಳಿದಂತೆ ಪ್ರತಿನಿತ್ಯ ರಾತ್ರಿ ಕರ್ಫ್ಯೂ ಜಾರಿಯಲ್ಲಿರಲಿದೆ.

ನಿರ್ಬಂಧ: ಶಾಲೆ-ಕಾಲೇಜು ಕೋಚಿಂಗ್ ಸೆಂಟರ್, ತರಬೇತಿ ಕೇಂದ್ರಗಳು, ಚಿತ್ರಮಂದಿರ, ಶಾಪಿಂಗ್ ಮಾಲ್, ಪಾರ್ಕ್‍ಗಳು ಸಂಪೂರ್ಣ ಬಂದ್. ಎಲ್ಲ ಬಗೆಯ ಧಾರ್ಮಿಕ ಕೇಂದ್ರಗಳಿಗೆ ಸಾರ್ವಜನಿಕರ ಪ್ರವೇಶ ನಿರ್ಬಂಧ, ಆದರೆ, ದೈನಂದಿನ ಪೂಜಾ ಕೈಂಕರ್ಯಕ್ಕೆ ತಡೆ ಇಲ್ಲ. ಹೊಟೇಲ್, ರೆಸ್ಟೋರೆಂಟ್, ಮದ್ಯದಂಗಡಿ ಮತ್ತು ರೆಸ್ಟೋರೆಂಟ್‍ಗಳಲ್ಲಿ ಪಾರ್ಸಲ್ ಸೇವೆಗೆ ಮಾತ್ರ ಅವಕಾಶ. ಸಾಮಾಜಿಕ, ರಾಜಕೀಯ, ಕ್ರೀಡೆ, ಮನೋರಂಜನೆ ಮತ್ತು ಶೈಕ್ಷಣಿಕ ಕಾರ್ಯಕ್ರಮಗಳಿಗೆ ನಿಷೇಧ ಹೇರಲಾಗಿದೆ.

ಅನುಮತಿ: ಕೋವಿಡ್ ಮಾರ್ಗಸೂಚಿ ಅನುಸರಿಸಿ ನಿರ್ಮಾಣ, ದುರಸ್ತಿ ಮತ್ತು ಕೃಷಿ ಚಟುವಟಿಕೆಗಳಿಗೆ ಅವಕಾಶ ನೀಡಲಾಗಿದೆ. ಎಲ್ಲ ಬಗೆಯ ಕೈಗಾರಿಕೆಗಳು, ಸಂಸ್ಥೆಗಳು, ಉತ್ಪಾದನ ಘಟಕಗಳು ಕಾರ್ಯ ನಿರ್ವಹಣೆ ಅನುಮತಿ ನೀಡಲಾಗಿದೆ. ವಸತಿ ಗೃಹಗಳಲ್ಲಿ ಈಗಾಗಲೇ ತಂಗಿರುವ ಅತಿಥಿಗಳಿಗೆ ಆಹಾರ ಮತ್ತು ಪಾನಿಯ ಸೇವೆಗೆ ಅವಕಾಶವಿದೆ. ಆಹಾರ ಮತ್ತು ದವಸ ಧಾನ್ಯ ಮಾರಾಟ ಮಾಡುವ ಅಂಗಡಿಗಳಿಗೆ ಅನುಮತಿ ನೀಡಲಾಗಿದೆ.

ದಿನಸಿ, ಹಣ್ಣು, ತರಕಾರಿ ಡೈರಿ, ಮಾಂಸ, ಔಷಧಿ, ಪ್ರಾಣಿಗಳ ಆಹಾರದ ಅಂಗಡಿಗೆ ಅನುಮತಿ, ಹೊಲ್‍ಸೇಲ್ ತರಕಾರಿ, ಹಣ್ಣು ಹೂವು ಅಂಗಡಿ ತೆರೆಯಬಹುದು, ಬ್ಯಾಂಕ್, ಎಟಿಎಂ ಇನ್ಶುರೆನ್ಸ್ ಕಂಪನಿಗಳಿಗೆ ತೆರೆಯಲು ಅವಕಾಶ, ಮಾಧ್ಯಮಕ್ಕೆ ಅವಕಾಶವಿದೆ. ಕ್ಷೌರದಂಗಡಿ, ಸಲೂನ್/ಬೂಟಿ ಪಾರ್ಲರ್‍ಗಳು ಕೋವಿಡ್ ಮುನ್ನಚ್ಚರಿಕೆಗಳೊಂದಿಗೆ ಕಾರ್ಯನಿರ್ವಹಣೆ ಮಾಡಲಿವೆ.

ಮೆಟ್ರೋ ರೈಲು, ಬಸ್, ಕ್ಯಾಬ್, ಆಟೋ ಸಂಚಾರಕ್ಕೆ ಅವಕಾಶವಿದೆ. ಆದರೆ, ಒಟ್ಟು ಆಸನ ಸಾಮಥ್ರ್ಯದ ಶೇ.50ರಷ್ಟು ಸೀಟು ಭರ್ತಿಗೆ ಅವಕಾಶ ನೀಡಲಾಗಿದೆ. ಶನಿವಾರ ಮತ್ತು ರವಿವಾರ ದಿನಸಿ, ತರಕಾರಿ, ಹಾಲು ಅಂಗಡಿಗಳಿಗೆ ಬೆಳಗ್ಗೆ 6ರಿಂದ 10ರ ವರೆಗೆ ಮಾತ್ರ ತೆರೆದಿರುತ್ತದೆ'

-ರಾಜ್ಯ ಸರಕಾರದ ಮಾರ್ಗಸೂಚಿ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News