​ಉಡುಪಿ : ದಿನದಲ್ಲಿ 274 ಮಂದಿಗೆ ಕೊರೋನ ಸೋಂಕು

Update: 2021-04-22 14:56 GMT

ಉಡುಪಿ, ಎ.22: ಕೊರೋನ ಸೋಂಕು ಗುರುವಾರ ಜಿಲ್ಲೆಯಲ್ಲಿ 274 ಮಂದಿಯಲ್ಲಿ ಕಂಡುಬಂದಿದೆ. ದಿನದಲ್ಲಿ 193 ಮಂದಿ ಸೋಂಕಿನಿಂದ ಗುಣಮುಖರಾದರೆ, ಸೋಂಕಿಗೆ ಸಕ್ರಿಯರಾಗಿರುವವರ ಸಂಖ್ಯೆಯೂ ಇದೀಗ 1165ಕ್ಕೆ ಏರಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಸುಧೀರ್‌ ಚಂದ್ರ ಸೂಡ ತಿಳಿಸಿದ್ದಾರೆ.

ಇಂದು ಪಾಸಿಟಿವ್ ಬಂದ 274 ಮಂದಿಯಲ್ಲಿ 149 ಮಂದಿ ಪುರುಷರಾದರೆ, 125 ಮಂದಿ ಮಹಿಳೆಯರು. ಇವರಲ್ಲಿ 127 ಮಂದಿ ಉಡುಪಿ ತಾಲೂಕಿನವರಾದರೆ, 91 ಮಂದಿ ಕುಂದಾಪುರ ಹಾಗೂ 53 ಮಂದಿ ಕಾರ್ಕಳ ತಾಲೂಕಿನವರು. ಹೊರಜಿಲ್ಲೆಯಿಂದ ಚಿಕಿತ್ಸೆ ಗೆಂದು ಬಂದ ಮೂವರು ಸಹ ಇಲ್ಲಿ ಕೋವಿಡ್ ಸೋಂಕಿಗೆ ಪಾಸಿಟಿವ್ ಬಂದಿದ್ದಾರೆ ಎಂದು ಡಾ.ಸೂಡ ತಿಳಿಸಿದರು.

ಬುಧವಾರ 193 ಮಂದಿ ಸೋಂಕಿನಿಂದ ಗುಣಮುಖರಾಗುವ ಮೂಲಕ ಜಿಲ್ಲೆಯಲ್ಲಿ ಕೊರೋನದಿಂದ ಚೇತರಿಸಿಕೊಂಡವರ ಸಂಖ್ಯೆ ಈಗ 26,398ಕ್ಕೇರಿದೆ. ನಿನ್ನೆ ಜಿಲ್ಲೆಯ 2270 ಮಂದಿ ಕೋವಿಡ್ ಪರೀಕ್ಷೆ ಮಾಡಿಸಿಕೊಂಡಿದ್ದಾರೆ. ಇಂದಿನ 274 ಮಂದಿ ಸೇರಿ ಈವರೆಗೆ ಸೋಂಕಿಗೆ ಪಾಸಿಟಿವ್ ಬಂದವರ ಸಂಖ್ಯೆ 27,757 ಎಂದು ಡಾ.ಸೂಡ ತಿಳಿಸಿದರು.

ಉಡುಪಿ ಜಿಲ್ಲೆಯಲ್ಲಿ ಈವರೆಗೆ ಒಟ್ಟು 4,78,915 ಮಂದಿಯನ್ನು ಕೋವಿಡ್ ಪರೀಕ್ಷೆ ಗೊಳಪಡಿಸಲಾಗಿದೆ. ಇಂದು ಅಧಿಕೃತವಾಗಿ ಕೊರೋನಕ್ಕೆ ಯಾರೂ ಬಲಿಯಾಗಿಲ್ಲ. ಈವರೆಗೆ ಕೊರೋನದಿಂದ ಮೃತಪಟ್ಟವರ ಸಂಖ್ಯೆ194 ಆಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News