ಉಡುಪಿ: ದಿನದಲ್ಲಿ 4125 ಮಂದಿಯಿಂದ ಲಸಿಕೆ ಸ್ವೀಕಾರ

Update: 2021-04-22 14:56 GMT

 ಉಡುಪಿ, ಎ.22: ಕೊರೋನ ವಿರುದ್ಧದ ಲಭ್ಯವಿರುವ ಲಸಿಕೆಯನ್ನು ಜಿಲ್ಲೆಯಲ್ಲಿ ಇಂದು ಒಟ್ಟು 4125 ಮಂದಿ ಸ್ವೀಕರಿಸಿದ್ದಾರೆ. ಇವರಲ್ಲಿ 2006 ಮಂದಿ ಲಸಿಕೆಯ ಮೊದಲ ಡೋಸ್ ಪಡೆದರೆ, 2119 ಮಂದಿಗೆ ಎರಡನೇ ಡೋಸ್ ನೀಡಲಾಯಿತು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸುಧೀರ್‌ಚಂದ್ರ ಸೂಡ ತಿಳಿಸಿದ್ದಾರೆ.

ಗುರುವಾರ ಜಿಲ್ಲೆಯಲ್ಲಿ 45 ವರ್ಷ ಮೇಲಿನ ಒಟ್ಟು 3876 ಮಂದಿ ಲಸಿಕೆಯನ್ನು ಸ್ವೀಕರಿಸಿದ್ದು, ಇವರಲ್ಲಿ 1944 ಮಂದಿ ಮೊದಲ ಡೋಸ್‌ನ್ನೂ, 1932 ಮಂದಿ ಎರಡನೇ ಡೋಸ್‌ನ್ನು ಪಡೆದಿದ್ದಾರೆ. 193 ಮಂದಿ ಆರೋಗ್ಯ ಕಾರ್ಯಕರ್ತರು ಹಾಗೂ 56 ಮಂದಿ ಕೊರೋನ ಮುಂಚೂಣಿ ಯೋಧರು ಸಹ ಇಂದು ಲಸಿಕೆ ಸ್ವೀಕರಿಸಿದವರಲ್ಲಿ ಸೇರಿದ್ದಾರೆ.

ಜಿಲ್ಲೆಯಲ್ಲಿ ಇದುವರೆಗೆ 1,73,942 ಮಂದಿ ಲಸಿಕೆಯ ಮೊದಲ ಡೋಸ್‌ನ್ನು ಪಡೆದರೆ, 34,725 ಮಂದಿ ಎರಡನೇ ಡೋಸ್‌ನ್ನು ಸ್ವೀಕರಿಸಿದ್ದಾರೆ ಎಂದು ಡಾ.ಸೂಡ ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News