ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳನ್ನು ಹಾಸ್ಟೆಲ್‍ನಿಂದ ಹೊರಹಾಕುವಂತಿಲ್ಲ: ಡಿಸಿಎಂ ಅಶ್ವತ್ಥನಾರಾಯಣ

Update: 2021-04-22 15:32 GMT

ಬೆಂಗಳೂರು, ಎ.22: ಇಂಜಿನಿಯರಿಂಗ್, ಡಿಪ್ಲೋಮ ಸೇರಿದಂತೆ ಉನ್ನತ ಶಿಕ್ಷಣ ವಿಭಾಗದಲ್ಲಿ ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳು ಹಾಸ್ಟೆಲ್‍ಗಳಲ್ಲಿದ್ದರೆ ಅಂಥವರನ್ನು ಅಲ್ಲಿಂದ ಹೊರ ಕಳುಹಿಸುವಂತಿಲ್ಲ ಎಂದು ಉನ್ನತ ಶಿಕ್ಷಣ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಹೇಳಿದ್ದಾರೆ.

ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಅವರು, ಹಾಸ್ಟೆಲ್‍ಗಳಲ್ಲಿ ಇದ್ದುಕೊಂಡು ಇಂಜಿನಿಯರಿಂಗ್, ಡಿಪ್ಲೋಮ, ಪಾಲಿಟೆಕ್ನಿಕ್, ಪದವಿ, ಸ್ನಾತಕೋತ್ತರ ಪದವಿ ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳನ್ನು ಹೊರಗೆ ಕಳಿಸಬಾರದು. ಪರೀಕ್ಷೆ ಮುಗಿಯುವ ತನಕ ಅವರಿಗೆ ಊಟ ವಸತಿ ಸೇರಿದಂತೆ ನೀಡಲಾಗುತ್ತಿರುವ ಎಲ್ಲ ಸೌಲಭ್ಯಗಳನ್ನು ಮುಂದುವರಿಸಬೇಕು ಎಂದು ಸೂಚಿಸಿದ್ದಾರೆ.

ಹಾಸ್ಟೆಲ್‍ಗಳಲ್ಲಿ ಕೋವಿಡ್ ಬಗ್ಗೆ ಎಚ್ಚರಿಕೆ ಕ್ರಮಗಳನ್ನು ಅನುಸರಿಸಬೇಕು. ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಅಶ್ವತ್ಥ ನಾರಾಯಣ ಹೇಳಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News