ಮಂಗಳೂರು ವಿವಿ: ಸ್ನಾತಕೋತ್ತರ ಪರೀಕ್ಷೆ ಮುಂದೂಡಿಕೆ

Update: 2021-04-22 16:11 GMT

ಕೊಣಾಜೆ: ಕೊವಿಡ್‌- 19 ಎರಡನೇ ಅಲೆ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಎಪ್ರಿಲ್‌ 21 ರಿಂದ ಮೇ 4 ರವರೆಗೆ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿದ್ದು ಮಂಗಳೂರು ವಿಶ್ವವಿದ್ಯಾನಿಲಯ ಎಪ್ರಿಲ್‌ 26 ರಿಂದ ನಡೆಯಬೇಕಿದ್ದ ಸ್ನಾತಕೋತ್ತರ ಪರೀಕ್ಷೆಗಳನ್ನು ಮುಂದಿನ ಆದೇಶದವರೆಗೆ ಮುಂದೂಡಿದೆ.

ಈ ಅವಧಿಯಲ್ಲಿ ಭೌತಿಕ ತರಗತಿಗಳಿಗೂ ರಜೆ ಘೋಷಿಸಲಾಗಿದೆ, ಆದರೆ ಆನ್‌ಲೈನ್‌ ತರಗತಿಗಳನ್ನು ನಡೆಸಬಹುದಾಗಿದೆ ಎಂದು ಕುಲಸಚಿವರ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News