ಮಣಿಪಾಲ : ಆಶ್ಲೇಶ್ ಹೋಟೆಲ್ ಕಟ್ಟಡದಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ
Update: 2021-04-22 22:01 IST
ಮಣಿಪಾಲ : ಇಲ್ಲಿನ ಆಶ್ಲೇಶ್ ಹೋಟೆಲ್ ಕಟ್ಟಡದಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಹೊತ್ತಿಕೊಂಡ ಘಟನೆ ಗುರುವಾರ ರಾತ್ರಿ ನಡೆದಿದೆ.
ಕಟ್ಟಡದಲ್ಲಿದ್ದ ಗೋಡೌನ್ ಒಂದರಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಸ್ಥಳದಲ್ಲಿ ಅಗ್ನಿಶಾಮಕ ದಳದಿಂದ ಕಾರ್ಯಾಚರಣೆ ನಡೆಯುತ್ತಿದೆ. ಮುಂಜಾಗ್ರತೆಯಾಗಿ ಪರಿಸರದಲ್ಲಿ ವಿದ್ಯುತ್ ಸಂಪರ್ಕವನ್ನು ಕಡಿತ ಮಾಡಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.