ಬಿಎಸ್‌ವೈ ಅವರೇ, ಲಾಠಿ ಕೊಟ್ಟು ಪೊಲೀಸರನ್ನು ಬೀದಿಗಿಳಿಸಿದರೆ ಕೊರೋನ ಓಡಿಹೋಗುವುದೇ: ಸಿದ್ದರಾಮಯ್ಯ

Update: 2021-04-22 17:31 GMT

ಬೆಂಗಳೂರು, ಎ.22: 'ಲಾಕ್ ಡೌನ್, ಬಂದ್, ಕರ್ಪ್ಯೂ‌.....ಇನ್ನೇನೋ, ಯಾವ ನಿರ್ಧಾರ ಕೈಗೊಳ್ಳುವುದಿದ್ದರೂ ಜನರಿಗೆ ಮನವರಿಕೆ ಮಾಡಿ, ವಿಶ್ವಾಸಕ್ಕೆ ತೆಗೆದುಕೊಂಡು ಪೂರ್ವಸಿದ್ದತೆಯೊಡನೆ ಮಾಡಿ. ತಟ್ಟೆ ಬಡಿಯುವ, ಕ್ಯಾಂಡಲ್ ಹಚ್ಚುವ ಶೈಲಿಯ ಇಂತಹ ತುಘಲಕ್ ದರ್ಬಾರ್ ಪುನರಾವರ್ತನೆ ಮಾಡಬೇಡಿ' ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಟೀಕಿಸಿದ್ದಾರೆ.

ಗುರುವಾರ ಸರಣಿ ಟ್ವೀಟ್ ಮಾಡಿರುವ ಅವರು, ಕೊರೋನ ಉಲ್ಭಣಗೊಂಡಿರುವುದು ಸರ್ಕಾರದ ನಿರ್ಲಕ್ಷ್ಯ, ನಿಷ್ಕ್ರಿಯತೆ ಮತ್ತು ದುರಾಡಳಿತದಿಂದ. ತಮ್ಮ ವೈಫಲ್ಯ ಮುಚ್ಚಿಹಾಕಲು ಪೊಲೀಸರ ಕೈಗೆ ಲಾಠಿ ಕೊಟ್ಟು ಬೀದಿಗಿಳಿಸಿದರೆ ಕೊರೋನ ಓಡಿಹೋಗುವುದೇ ಬಿಎಸ್ ಯಡಿಯೂರಪ್ಪ ಅವರೇ?' ಎಂದು ಪ್ರಶ್ನಿಸಿದ್ದಾರೆ.

'ಇದೇನು ಚುನಾಯಿತ ಸರ್ಕಾರವೋ? ಹುಚ್ಚರ ಸಂತೆಯೋ? ಕ್ಷಣ ಕ್ಷಣಕ್ಕೂ ಬದಲಾಗುವ ನಿರ್ಧಾರ- ಮಾರ್ಗಸೂಚಿಗಳು, ಅಘೋಷಿತ ಲಾಕ್ ಡೌನ್,  ಅಮಾಯಕ ಜನತೆ ಮೇಲೆ ದೌರ್ಜನ್ಯ..ಏನಿದು ಮುಖ್ಯಮಂತ್ರಿ ಯಡಿಯೂರಪ್ಪ ಅವರೇ, ಆಡಳಿತ ನಡೆಸಲಾಗದಿದ್ದರೆ ಕುರ್ಚಿಬಿಟ್ಟು ತೊಲಗಿ, ಜನರನ್ನು ಯಾಕೆ ಗೋಳು ಹೊಯ್ಕೊಳ್ತೀರಿ?' ಎಂದು ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News