ಎ.26: ಆನ್‌ಲೈನ್ ವೀಡಿಯೋ ಕವಿ ಸಮ್ಮೇಳನ
Update: 2021-04-23 21:52 IST
ಮಂಗಳೂರು, ಎ.23: ಮಂಗಳೂರು ತಾಲೂಕು ಚುಟುಕು ಸಾಹಿತ್ಯ ಪರಿಷತ್ ವತಿಯಿಂದ ರಾಜ್ಯಮಟ್ಟದ ಆನ್‌ಲೈನ್ ವೀಡಿಯೊ ಕವಿ ಸಮ್ಮೇಳನ ‘ಕನ್ನಡ ಕವಿ ಕಾವ್ಯ ಕಲರವ’ವು ಎ.26ರಂದು ಸಂಜೆ 4 ಗಂಟೆಯಿಂದ ಡಿಜಿಟಲ್ ವೇದಿಕೆಯಲ್ಲಿ ನಡೆಯಲಿದೆ.
ಸಮ್ಮೇಳನವನ್ನು ಮೈಸೂರಿನ ಕೇಂದ್ರ ಚುಟುಕು ಸಾಹಿತ್ಯ ಪರಿಷತ್ತಿನ ಸಂಚಾಲಕ ಡಾ.ಎಂ.ಜಿ.ಆರ್.ಅರಸ್ ಉದ್ಘಾಟಿಸುವರು. ಸಾಹಿತಿ ಪ್ರೊ.ಬಿ.ಆರ್.ಪೊಲೀಸ್ ಪಾಟೀಲ್ ಬಾಗಲಕೋಟೆ ಅಧ್ಯಕ್ಷತೆ ವಹಿಸುವರು. ಮಂಗಳೂರು ತಾಲೂಕು ಚುಟುಕು ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಕಾ.ವೀ.ಕೃಷ್ಣದಾಸ್ ಆಶಯ ಭಾಷಣ ಮಾಡುವರು. ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ತಿನ ಗೌರವಾಧ್ಯಕ್ಷ ಇರಾ ನೇಮು ಪೂಜಾರಿ, ಜಿಲ್ಲಾಧ್ಯಕ್ಷ ಹರೀಶ ಸುಲಾಯ ಒಡ್ಡಂಬೆಟ್ಟು ಅತಿಥಿಗಳಾಗಿ ಭಾಗವಹಿಸುವರು ಎಂದು ಪ್ರಕಟನೆ ತಿಳಿಸಿದೆ.