ಪಶ್ಚಿಮಬಂಗಾಳಕ್ಕೆ ತೆರಳುವ ವಿಮಾನ ಪ್ರಯಾಣಿಕರಿಗೆ ಕೋವಿಡ್ ನೆಗಟಿವ್ ವರದಿ ಸಲ್ಲಿಕೆ ಕಡ್ಡಾಯ
Update: 2021-04-23 21:52 IST
ಕೋಲ್ಕತಾ: ದಿಲ್ಲಿ , ಉತ್ತರ ಪ್ರದೇಶ, ಮಧ್ಯಪ್ರದೇಶ, ಗುಜರಾತ್ ಹಾಗೂ ಛತ್ತೀಸ್ ಗಢದಿಂದ ಎಪ್ರಿಲ್ 26 ರಿಂದ ಪಶ್ಚಿಮಬಂಗಾಳಕ್ಕೆ ಪ್ರಯಾಣಿಸುವ ವಿಮಾನ ಪ್ರಯಾಣಿಕರು ಋಣಾತ್ಮಕ(ನೆಗೆಟಿವ್)ಕೋವಿಡ್ ವರದಿಗಳನ್ನು ಪ್ರಸ್ತುತಪಡಿಸಬೇಕಾಗುತ್ತದೆ. ವರದಿಯು 72 ಗಂಟೆಗಳಿಗಿಂತ ಹಳೆಯದಾಗಿರಬಾರದು ಎಂದು ಪಶ್ಚಿಮ ಬಂಗಾಳ ಸರಕಾರವು ನಾಗರಿಕ ವಿಮಾನಯಾನ ಸಚಿವಾಲಯಕ್ಕೆ ತಿಳಿಸಿದೆ.
ಇದೇ ವೇಳೆ ಪಶ್ಚಿಮ ಬಂಗಾಳದಲ್ಲಿ ಕಳೆದ 24 ಗಂಟೆಗಳಲ್ಲಿ 12,876 ಹೊಸ ಕೋವಿಡ್-19 ಪ್ರಕರಣಗಳು ವರದಿಯಾಗಿದ್ದು, 59 ಮಂದಿ ಸಾವನ್ನಪ್ಪಿದ್ದಾರೆ. 6,878 ಮಂದಿ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ.