×
Ad

ಮಂಗಳೂರು ಪ್ರೆಸ್ ಕ್ಲಬ್ ಪತ್ರಿಕಾಗೋಷ್ಠಿ ತಾತ್ಕಾಲಿಕ ಸ್ಥಗಿತ

Update: 2021-04-23 21:55 IST

ಮಂಗಳೂರು: ಕೊರೊನಾ ವೈರಸ್ (ಕೋವಿಡ್-19) ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಮಂಗಳೂರು ಪ್ರೆಸ್ ಕ್ಲಬ್‌ನಿಂದ ಪತ್ರಿಕಾ ಭವನದಲ್ಲಿ ನಡೆಸುವ ಪತ್ರಿಕಾಗೋಷ್ಠಿಗಳನ್ನು ಮೇ 4ರ ತನಕ ರದ್ದುಪಡಿಸಲಾಗಿದೆ ಎಂದು ಮಂಗಳೂರು ಪ್ರೆಸ್ ಕ್ಲಬ್ ಇದರ ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ಆರಿಫ್ ತಿಳಿಸಿದ್ದಾರೆ.

ಮುಂದಿನ ಪರಿಸ್ಥಿತಿ ಅವಲೋಕಿಸಿ, ತೀರ್ಮಾನ ಕೈಗೊಳ್ಳಲಾಗುವುದು. ಪತ್ರಕರ್ತರು ಇತರೆಡೆ ಸುದ್ದಿ ಮಾಡುವ ಸಂದರ್ಭದಲ್ಲೂ ಮಾಸ್ಕ್ ಧರಿಸಿ,  ಅಂತರ ಕಾಯ್ದುಕೊಂಡು ಎಲ್ಲ ಎಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು. ಜನಜಂಗುಳಿ ಇರುವ ಪ್ರದೇಶಗಳಿಗೆ ತೆರಳದೆ, ಎಚ್ಚರಿಕೆಯಿಂದ ಕಾರ್ಯನಿರ್ವಹಿಸಬೇಕು. ತಮ್ಮನ್ನು ಕೊರೊನಾ ವೈರಸ್‌ನಿಂದ ರಕ್ಷಿಸಿಕೊಳ್ಳಲು ಸ್ವಯಂ ಸುರಕ್ಷಾ ಕ್ರಮಗಳನ್ನು ಕಡ್ಡಾಯವಾಗಿ ಕೈಗೊಳ್ಳಬೇಕು.

ಕರ್ತವ್ಯಕ್ಕೆ ತೆರಳುವ ಪತ್ರಕರ್ತರಿಗೆ ಕರ್ಫ್ಯೂ ಸಂದರ್ಭ ವಿನಾಯಿತಿ ನೀಡಲು ಜಿಲ್ಲಾಧಿಕಾರಿ ಮತ್ತು ಪೊಲೀಸ್ ಕಮೀಷನರ್‌ಗೆ ಮನವಿ ಮಾಡಿದ್ದು, ಅವರು ಸೂಕ್ತವಾಗಿ ಸ್ಪಂದಿಸಿದ್ದಾರೆ. ನೈಟ್ ಕರ್ಫ್ಯೂ, ವೀಕೆಂಡ್ ಕರ್ಫ್ಯೂ ಸಂದರ್ಭದಲ್ಲಿ ಕರ್ತವ್ಯದಲ್ಲಿರುವ ಪತ್ರಕರ್ತರು ತಮ್ಮ ಗುರುತುಪತ್ರಗಳನ್ನು ತಪಾಸಣಾ ಅಧಿಕಾರಿಗಳಿಗೆ ತೋರಿಸಿ ಸಂಚರಿಸಬಹುದು ಎಂದು ಮಂಗಳೂರು ಪ್ರೆಸ್ ಕ್ಲಬ್ ಇದರ ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ಆರಿಫ್ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News