18 ವರ್ಷ ಮೇಲ್ಪಟ್ಟವರಿಗೆ ಕೊರೋನ ಲಸಿಕೆ ಉಚಿತ: ಜಾರ್ಖಂಡ್ ಸರಕಾರ ಘೋಷಣೆ
Update: 2021-04-23 22:50 IST
ರಾಂಚಿ, ಎ.23: 18 ವರ್ಷ ಮೇಲ್ಪಟ್ಟವರಿಗೆ ಕೊರೋನ ಸೋಂಕಿನ ವಿರುದ್ಧದ ಲಸಿಕೆಯನ್ನು ಉಚಿತವಾಗಿ ಒದಗಿಸಲಾಗುವುದು ಎಂದು ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೇನ್ ಘೋಷಿಸಿದ್ದಾರೆ. ಜಾರ್ಖಂಡ್ನಲ್ಲಿ ಜೆಎಂಎಂ-ಕಾಂಗ್ರೆಸ್- ಆರ್ಜೆಡಿ ಮೈತ್ರಿ ಸರಕಾರ ಅಸ್ತಿತ್ವದಲ್ಲಿದೆ. ಮೇ 1ರಿಂದ ಆರಂಭವಾಗುವ ಮೂರನೇ ಹಂತದ ಲಸಿಕೆ ಅಭಿಯಾನದಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಕೊರೋನ ಸೋಂಕಿನ ವಿರುದ್ಧದ ಲಸಿಕೆ ನೀಡಲಾಗುತ್ತಿದೆ. ಮೂರನೇ ಹಂತದಲ್ಲಿ ರಾಜ್ಯ ಸರಕಾರ ಹಾಗೂ ಖಾಸಗಿ ಆಸ್ಪತ್ರೆಗಳು ಲಸಿಕೆಯನ್ನು ಉತ್ಪಾದಕರಿಂದ ಖರೀದಿಸಿ ಜನರಿಗೆ ನೀಡಬೇಕಾಗಿದೆ.