×
Ad

ಆಮ್ಲಜನಕ, ಲಸಿಕೆಗಳ ಮೇಲಿನ ಕಸ್ಟಮ್ಸ್ ಸುಂಕ ಮನ್ನಾ ಮಾಡಿದ ಕೇಂದ್ರ ಸರಕಾರ

Update: 2021-04-24 16:49 IST

ಹೊಸದಿಲ್ಲಿ: ಭಾರತದಲ್ಲಿ ಉಲ್ಬಣಗೊಳ್ಳುತ್ತಿರುವ ಕೊರೋನ ವೈರಸ್ ಬಿಕ್ಕಟ್ಟಿನ ಮಧ್ಯೆ ಲಭ್ಯತೆಯನ್ನು ಹೆಚ್ಚಿಸಲು ಕೋವಿಡ್ ಲಸಿಕೆಗಳು, ಆಮ್ಲಜನಕ ಮತ್ತು ಆಮ್ಲಜನಕ ಸಂಬಂಧಿತ ಸಾಧನಗಳ ಮೇಲಿನ ಮೂಲ ಕಸ್ಟಮ್ಸ್ ಸುಂಕವನ್ನು ಮನ್ನಾ ಮಾಡಲು ಕೇಂದ್ರ ಸರಕಾರವು ಶನಿವಾರ ನಿರ್ಧರಿಸಿದೆ.

ಆಮ್ಲಜನಕ ಪೂರೈಕೆಯನ್ನು ಹೆಚ್ಚಿಸುವ ಕ್ರಮಗಳ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.

"ವೈದ್ಯಕೀಯ ದರ್ಜೆಯ ಆಮ್ಲಜನಕದ ಪೂರೈಕೆಯನ್ನು ಹೆಚ್ಚಿಸಲು ಹಾಗೂ  ಮನೆಯಲ್ಲಿ ಮತ್ತು ಆಸ್ಪತ್ರೆಗಳಲ್ಲಿ ರೋಗಿಗಳ ಆರೈಕೆಗೆ ಅಗತ್ಯವಾದ ಸಲಕರಣೆಯನ್ನು ತ್ವರಿತವಾಗಿ ಹೆಚ್ಚಿಸುವ ಅವಶ್ಯಕತೆಯಿದೆ’’ ಎಂದು ಪ್ರಧಾನಿ ಒತ್ತಿ ಹೇಳಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News