×
Ad

ಪುಣೆ: ಮೆಗ್ನೀಸಿಯಮ್ ಕಾರ್ಖಾನೆಯಲ್ಲಿ ಭಾರೀ ಸ್ಫೋಟ, ಬೆಂಕಿ ನಂದಿಸಲು ಯತ್ನ

Update: 2021-04-24 20:08 IST

ಮುಂಬೈ: ಮಹಾರಾಷ್ಟ್ರದ ಪುಣೆ ನಗರದ ಸಮೀಪ ಪಿಂಪ್ರಿ-ಚಿಂಚ್‌ವಾಡ್‌ನಲ್ಲಿರುವ ಮೆಗ್ನೀಸಿಯಮ್ ಕಾರ್ಖಾನೆಯಲ್ಲಿ ಶನಿವಾರ ಭಾರೀ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿಯನ್ನು ನಿಯಂತ್ರಿಸಲು ಪ್ರಯತ್ನಗಳು ಮುಂದುವರಿದಿದ್ದು, ಯಾವುದೇ ಪ್ರಾಣಹಾನಿ ಸಂಭವಿಸಿರುವ ಕುರಿತು ವರದಿಯಾಗಿಲ್ಲ.

ಬೆಂಕಿಯನ್ನು ನಂದಿಸಲು ಅಗ್ನಿಶಾಮಕ ಇಲಾಖೆಯ ನಾಲ್ಕು ವಾಹನಗಳನ್ನು ಮೆಗ್ನೀಸಿಯಮ್ ಕಾರ್ಖಾನೆಗೆ ರವಾನಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಆದಾಗ್ಯೂ, ಸ್ಥಳದಲ್ಲಿ ಮೆಗ್ನೀಸಿಯಮ್ ಹೆಚ್ಚಿನ ಪ್ರಮಾಣದಲ್ಲಿರುವುದರಿಂದ ಭಾರೀ ಬೆಂಕಿ ಕಾಣಿಸಿಕೊಂಡಿದ್ದು, ಅಗ್ನಿಶಾಮಕ ದಳದವರು ನೀರಿನಿಂದ ಬೆಂಕಿ ನಂದಿಸಲು ಯತ್ನಿಸುತ್ತಿದ್ದಾರೆ.

 ಬೆಂಕಿಯಿಂದ ಯಾವುದೇ ಗಾಯಗಳು ಅಥವಾ ಪ್ರಾಣಹಾನಿ ಸಂಭವಿಸಿಲ್ಲ ಎಂದು ಪಿಂಪ್ರಿ-ಚಿಂಚ್‌ವಾಡ್ ಮಹಾನಗರ ಪಾಲಿಕೆಯ ಅಗ್ನಿಶಾಮಕ ವಿಭಾಗದ ಮುಖ್ಯಸ್ಥ ಕಿರಣ್ ಗವಾಡೆ ದೃಢಪಡಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News