×
Ad

ಭಾರತಕ್ಕೆ ಆಮ್ಲಜನಕ ಸಿಲಿಂಡರ್ ಪೂರೈಸಲು ನೆರವಾಗಿ: ಅಖ್ತರ್ ಮನವಿ

Update: 2021-04-24 21:31 IST

ಹೊಸದಿಲ್ಲಿ: ಕೊರೋನ ವೈರಸ್ ಸಾಂಕ್ರಾಮಿಕ ರೋಗದ ಬಿಕ್ಕಟ್ಟನ್ನು ಎದುರಿಸುತ್ತಿರುವ ಭಾರತಕ್ಕೆ ನೆರವಾಗುವಂತೆ ಪಾಕಿಸ್ತಾನ ಸರಕಾರ ಹಾಗೂ ತನ್ನ ಅಭಿಮಾನಿಗಳಲ್ಲಿ ಮಾಜಿ ವೇಗದ ಬೌಲರ್ ಶುಐಬ್ ಅಖ್ತರ್ ಮನವಿ ಮಾಡಿದ್ದಾರೆ.

“ಈಗಿರುವ ಬಿಕ್ಕಟ್ಟಿನ ಪರಿಸ್ಥಿತಿಯನ್ನು ನಿಭಾಯಿಸುವುದು ಯಾವುದೇ ಸರಕಾರಕ್ಕೆ ಕಷ್ಟಕರವಾಗಿದೆ. ಈ ಕಷ್ಟದ ಪರಿಸ್ಥಿತಿಯಲ್ಲಿ ಭಾರತಕ್ಕೆ ಸಹಾಯ ಮಾಡುವಂತೆ ನನ್ನ ಸರಕಾರ ಹಾಗೂ ಅಭಿಮಾನಿಗಳಲ್ಲಿ ವಿನಂತಿ ಮಾಡುತ್ತೇನೆ. ಭಾರತಕ್ಕೆ ಸಾಕಷ್ಟು ಆಮ್ಲಜನಕ ಸಿಲಿಂಡರ್ ಗಳ ಅಗತ್ಯವಿದೆ. ಆಮ್ಲಜನಕ ಸಿಲಿಂಡರ್ ಗಳನ್ನು ಭಾರತಕ್ಕೆ ಪೂರೈಸಲು ಪ್ರತಿಯೊಬ್ಬರೂ ದೇಣಿಗೆ ನೀಡಲು ಮನವಿ ಮಾಡುತ್ತೇನೆ ಎಂದು ಅಖ್ತರ್ ಅವರು ವೀಡಿಯೊ ಸಹಿತ ಟ್ವೀಟಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News