ಕೋವಿಡ್‍ನಿಂದ ಮೃತಪಟ್ಟ ವ್ಯಕ್ತಿಯ ಬೆಲೆಬಾಳುವ ವಸ್ತುಗಳು ಕಳವು
Update: 2021-04-24 22:38 IST
ಬೆಂಗಳೂರು, ಎ.24: ಕೋವಿಡ್ ಸೋಂಕಿನ ಪರಿಣಾಮ ಮೃತಪಟ್ಟ ವ್ಯಕ್ತಿವೊಬ್ಬರಿಂದ ಬೆಲೆಬಾಳುವ ವಸ್ತುಗಳನ್ನು ಆಸ್ಪತ್ರೆಯಲ್ಲಿ ಕಳವು ಮಾಡಿರುವ ಆರೋಪ ಕೇಳಿಬಂದಿದೆ.
ಅತ್ತಿಬೆಲೆಯಲ್ಲಿ ಈ ಘಟನೆ ನಡೆದಿದ್ದು, ಇಲ್ಲಿನ ಆಸ್ಪತ್ರೆಯಲ್ಲಿ ಮೂರು ದಿನಗಳ ಹಿಂದೆ ವ್ಯಕ್ತಿಯೊಬ್ಬರು ಸೋಂಕಿಗೆ ಬಲಿಯಾಗಿದ್ದು, ಅವರ ಬೆಲೆ ಬಾಳುವ ವಸ್ತುಗಳನ್ನು ಕಳವು ಮಾಡಿರುವ ಬಗ್ಗೆ ಅವರ ಪುತ್ರಿ ಆರೋಪಿಸಿದ್ದಾರೆ.
ತಂದೆಯನ್ನು ಆಸ್ಪತ್ರೆಗೆ ಸೇರಿಸುವಾಗ ಬಂಗಾರದ ಆಭರಣಗಳು ಹಾಗೂ ಮೊಬೈಲ್ ಅವರ ಬಳಿ ಇತ್ತು. ಆದರೆ, ಮೃತಪಟ್ಟನಂತರ ಅವೆಲ್ಲವೂ ಕಣ್ಮರೆಯಾಗಿದೆ. ಕೇಳಿದರೆ ಅವರ ಮೈಮೇಲೆ ಏನೂ ಇರಲಿಲ್ಲ ಎಂದು ಸಮಜಾಯಿಷಿ ಕೊಡುತ್ತಾರೆ. ಆಸ್ಪತ್ರೆಗಳಲ್ಲಿ ಕಳ್ಳತನವಾಗುತ್ತಿದ್ದು, ಈ ಸಂಬಂಧ ಪೊಲೀಸರಿಗೆ ದೂರು ನೀಡಲಾಗಿದೆ ಎಂದು ಹೇಳಿದರು.