ಗರೀಬ್ ಕಲ್ಯಾಣ ಯೋಜನೆಯಡಿ ಬಡವರಿಗೆ ಉಚಿತವಾಗಿ 5 ಕೆಜಿ ಅಕ್ಕಿ: ಮುಖ್ಯಮಂತ್ರಿ ಯಡಿಯೂರಪ್ಪ

Update: 2021-04-25 12:08 GMT

ಬೆಂಗಳೂರು, ಎ. 25: `ಕೋವಿಡ್-19 ಸೋಂಕಿನ ಸಾಂಕ್ರಾಮಿಕದ ಈ ಸಂದರ್ಭದಲ್ಲಿ ದೇಶದ ಜನತೆಗೆ ನೆರವಾಗುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ, ಇದೇ ಮೇ ಮತ್ತು ಜೂನ್ ತಿಂಗಳಲ್ಲಿ `ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಅನ್ನ ಯೋಜನೆ' ಫಲಾನುಭವಿಗಳಿಗೆ 5 ಕಿ.ಜಿ. ಉಚಿತ ಆಹಾರ ಧಾನ್ಯಗಳನ್ನು ಒದಗಿಸುತ್ತಿದೆ. ರಾಜ್ಯದಲ್ಲಿ ಸುಮಾರು 4.10 ಕೋಟಿ ಜನರಿಗೆ ಈ ನೆರವು ದೊರೆಯಲಿದೆ' ಎಂದು ಮುಖ್ಯಮಂತ್ರಿ ಯಡಿಯೂರಪ್ಪ ತಿಳಿಸಿದ್ದಾರೆ.

ರವಿವಾರ ಟ್ವೀಟ್ ಮಾಡಿರುವ ಅವರು, `ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಅನ್ನ ಯೋಜನೆ'ಯಡಿ ಕೇಂದ್ರ ಸರಕಾರ ಉಚಿತ ಆಹಾರ ಧಾನ್ಯ ವಿತರಣೆ ಮಾಡುತ್ತಿದ್ದು, ಕೊರೋನ ಸಂಕಷ್ಟದ ನಡುವೆ ಬಡಜನರಿಗೆ ನೆರವಿಗೆ ಧಾವಿಸಿರುವ ಕೇಂದ್ರ ಸರಕಾರ 26 ಸಾವಿರ ಕೋಟಿ ರೂ.ವೆಚ್ಚದಲ್ಲಿ ಮೇ ಮತ್ತು ಜೂನ್ ತಿಂಗಳಿನಲ್ಲಿ 5 ಕೆ.ಜಿ. ಉಚಿತ ಆಹಾರ ಧಾನ್ಯಗಳನ್ನು ವಿತರಿಸಲಿದೆ ಎಂದು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News