ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಪಿಎಂ ಕೇರ್ಸ್ ಮೂಲಕ ಆಕ್ಸಿಜನ್ ಉತ್ಪಾದನಾ ಘಟಕ: ಸಿಎಂ ಯಡಿಯೂರಪ್ಪ

Update: 2021-04-25 12:30 GMT

ಬೆಂಗಳೂರು, ಎ. 25: `ದೇಶಾದ್ಯಂತ ಜಿಲ್ಲಾ ಕೇಂದ್ರಗಳ ಸರಕಾರಿ ಆಸ್ಪತ್ರೆಗಳಲ್ಲಿ, ಒಟ್ಟು 551 ಆಕ್ಸಿಜನ್ ಉತ್ಪಾದನಾ ಘಟಕಗಳನ್ನು ಪಿಎಂ ಕೇರ್ಸ್ ಮೂಲಕ ಸ್ಥಾಪಿಸಲಾಗುತ್ತಿದ್ದು, ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರಿಗೆ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ತಿಳಿಸಿದ್ದಾರೆ.

ರವಿವಾರ ಸರಣಿ ಟ್ವೀಟ್ ಮಾಡಿರುವ ಯಡಿಯೂರಪ್ಪ, `ಈ ಮೂಲಕ ಸರಕಾರಿ ಆಸ್ಪತ್ರೆಗಳಲ್ಲಿ ತುರ್ತಾಗಿ ಆಕ್ಸಿಜನ್ ಘಟಕಗಳ ಸ್ಥಾಪನೆಯ ಕರ್ನಾಟಕ ರಾಜ್ಯದ ಕೋರಿಕೆಯನ್ನು ಕೇಂದ್ರ ಸರಕಾರ ಈಡೇರಿಸಿದೆ' ಎಂದು ಇದೇ ಸಂದರ್ಭದಲ್ಲಿ ತಿಳಿಸಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News