ತುಮಕೂರು: ಕೋವಿಡ್‍ಗೆ ಟೂಡಾ ಮಾಜಿ ಅಧ್ಯಕ್ಷ ಸಿ.ಶಿವಮೂರ್ತಿ ಬಲಿ

Update: 2021-04-25 12:47 GMT

ತುಮಕೂರು: ಹಿರಿಯ ಕಾಂಗ್ರೆಸ್ ಮುಖಂಡ, ಟೂಡಾ ಮಾಜಿ ಅಧ್ಯಕ್ಷ ಹಾಗೂ ಇಂದಿರಾ ವಿದ್ಯಾಸಂಸ್ಥೆಯ ಅಧ್ಯಕ್ಷ ಸಿ.ಶಿವಮೂರ್ತಿ ಇಂದು ಕೋವಿಡ್‍ಗೆ ಬಲಿಯಾಗಿದ್ದಾರೆ.ಇವರಿಗೆ 83 ವರ್ಷ ವಯಸ್ಸಾಗಿತ್ತು.ಕಳೆದ ಮೂರು ದಿನಗಳ ಹಿಂದೆ ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದ ಇವರು, ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.

ಇಂದಿರಾ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾಗಿ,ಕಬ್ಬಡಿ ಸಂಸ್ಥೆಯ ಕಾರ್ಯದರ್ಶಿಯಾಗಿ,ಕರ್ನಾಟಕ ಪ್ರದೇಶ ಕುರುಬರ ಸಂಘದ ನಿರ್ದೇಶಕರಾಗಿ, ಕನಕ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿಯೂ ಕಾರ್ಯನಿರ್ವಹಿಸಿದ್ದ ಸಿ.ಶಿವಮೂರ್ತಿ,ಕಾಂಗ್ರೆಸ್ ಪಕ್ಷದಲ್ಲಿ ಹಲವಾರು ಹುದ್ದೆಗಳನ್ನು ಅಲಂಕರಿಸಿದ್ದ ಅವರು,ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಾಲದಲ್ಲಿ ತುಮಕೂರು ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷರಾಗಿಯೂ ಕಾರ್ಯನಿರ್ವಹಿಸಿದ್ದರು.

ಮಾಜಿ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್,ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಆರ್.ರಾಮಕೃಷ್ಣ,ಮಾಜಿ ಅಧ್ಯಕ್ಷರಾದ ಕೆಂಚಮಾರಯ್ಯ ಹಾಗೂ ಕಾಂಗ್ರೆಸ್ ಪಕ್ಷದ ಮಂಚೂಣಿ ಘಟಕಗಳ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಸಿ.ಶಿವಮೂರ್ತಿ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.

ಹಲವು ವರ್ಷಗಳ ಕಾಲ ಕಾಂಗ್ರೆಸ್ ಪಕ್ಷದಲ್ಲಿ ಸಕ್ರಿಯ ಕಾರ್ಯಕರ್ತರಾಗಿ ದುಡಿದಿದ್ದ ಸಿ.ಶಿವಮೂರ್ತಿ ಅವರು, ಪಕ್ಷ ನಿಷ್ಠೆಗೆ ಹೆಸರಾದವರು.

ಕಬ್ಬಡಿ ಆಟಗಾರರಾಗಿ ಹಲವಾರು ಟೂರ್ನಿಗಳಲ್ಲಿ ಪಾಲ್ಗೊಂಡಿದ್ದರು. ಕಾಂಗ್ರೆಸ್ ಪಕ್ಷದಲ್ಲಿಯೂ ಹಲವು ಹುದ್ದೆಗಳಲ್ಲಿ ಕಾರ್ಯನಿರ್ವಹಿಸಿದ್ದ ಇವರು, ಪ್ರಸ್ತುತ ಜಿಲ್ಲಾ ಕಾಂಗ್ರೆಸ್ ಹಿರಿಯ  ಉಪಾಧ್ಯಕ್ಷರಾಗಿ ಕಾರ್ಯನಿರ್ವಹಿಸುತಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News