×
Ad

ಉಡುಪಿ: ರವಿವಾರ 319 ಮಂದಿಯಲ್ಲಿ ಕೊರೋನ ಪಾಸಿಟಿವ್

Update: 2021-04-25 19:21 IST

ಉಡುಪಿ, ಎ. 25: ಜಿಲ್ಲೆಯಲ್ಲಿ ರವಿವಾರ 319 ಮಂದಿ ಹೊಸದಾಗಿ ಕೋವಿಡ್‌ಗೆ ಪಾಸಿಟಿವ್ ಬಂದಿದ್ದಾರೆ. ದಿನದಲ್ಲಿ 245 ಮಂದಿ ಸೋಂಕಿನಿಂದ ಗುಣಮುಖರಾದರೆ, ಸೋಂಕಿಗೆ ಸಕ್ರಿಯರಾಗಿರುವವರ ಸಂಖ್ಯೆಯೂ ಇದೀಗ 1565ಕ್ಕೆ ಏರಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಸುಧೀರ್‌ಚಂದ್ರ ಸೂಡ ತಿಳಿಸಿದ್ದಾರೆ.

ಇಂದು ಪಾಸಿಟಿವ್ ಬಂದ 319 ಮಂದಿಯಲ್ಲಿ 161 ಮಂದಿ ಪುರುಷ ರಾದರೆ, 158 ಮಂದಿ ಮಹಿಳೆಯರು. ಇವರಲ್ಲಿ 156 ಮಂದಿ ಉಡುಪಿ ತಾಲೂಕಿನವರಾದರೆ, 103 ಮಂದಿ ಕುಂದಾಪುರ ಹಾಗೂ 59 ಮಂದಿ ಕಾರ್ಕಳ ತಾಲೂಕಿನವರು. ಹೊರಜಿಲ್ಲೆಯಿಂದ ಬಂದ ಒಬ್ಬರು ಇಂದು ಕೋವಿಡ್ ಸೋಂಕಿಗೆ ಪಾಸಿಟಿವ್ ಬಂದಿದ್ದಾರೆ ಎಂದು ಡಾ.ಸೂಡ ತಿಳಿಸಿದರು.

ಶನಿವಾರ 245 ಮಂದಿ ಸೋಂಕಿನಿಂದ ಗುಣಮುಖರಾಗುವ ಮೂಲಕ ಜಿಲ್ಲೆಯಲ್ಲಿ ಕೊರೋನದಿಂದ ಚೇತರಿಸಿಕೊಂಡವರ ಸಂಖ್ಯೆ ಈಗ 27,002 ಕ್ಕೇರಿದೆ. ನಿನ್ನೆ ಜಿಲ್ಲೆಯ 3820 ಮಂದಿ ಕೋವಿಡ್ ಪರೀಕ್ಷೆ ಮಾಡಿಸಿಕೊಂಡಿದ್ದಾರೆ. ಇಂದಿನ 319 ಮಂದಿ ಸೇರಿ ಈವರೆಗೆ ಸೋಂಕಿಗೆ ಪಾಸಿಟಿವ್ ಬಂದವರ ಸಂಖ್ಯೆ 28,761ಆಗಿದೆ ಎಂದು ಡಾ.ಸೂಡ ತಿಳಿಸಿದರು.

ಉಡುಪಿ ಜಿಲ್ಲೆಯಲ್ಲಿ ಈವರೆಗೆ ಒಟ್ಟು 4,88,711 ಮಂದಿಯನ್ನು ಕೋವಿಡ್ ಪರೀಕ್ಷೆಗೊಳಪಡಿಸಲಾಗಿದೆ. ರವಿವಾರ ಸಹ ಅಧಿಕೃತವಾಗಿ ಕೊರೋನದಿಂದ ಯಾರೂ ಮೃತಪಟ್ಟಿಲ್ಲ. ಈವರೆಗೆ ಕೊರೋನದಿಂದ ಮೃತಪಟ್ಟವರ ಸಂಖ್ಯೆ 194 ಆಗಿದೆ.

183 ಮಂದಿಗೆ ಲಸಿಕೆ ನೀಡಿಕೆ: ರವಿವಾರ ಜಿಲ್ಲೆಯಲ್ಲಿ 183 ಮಂದಿಗೆ ಕೊರೋನ ವಿರುದ್ಧದ ಲಸಿಕೆಯನ್ನು ನೀಡಲಾಗಿದೆ. ಇವರಲ್ಲಿ 99 ಮಂದಿ ಮೊದಲ ಡೋಸ್‌ನ್ನು 84 ಮಂದಿ ಎರಡನೇ ಡೋಸ್‌ನ್ನು ಪಡೆದಿದ್ದಾರೆ. 45 ವರ್ಷ ಮೇಲಿನ ಒಟ್ಟು 177 (96+81) ಮಂದಿ ಲಸಿಕೆಯನ್ನು ಸ್ವೀಕರಿಸಿದರೆ, ಐವರು ಆರೋಗ್ಯ ಕಾರ್ಯಕರ್ತರು ಹಾಗೂ ಒಬ್ಬ ಕೊರೋನ ಮುಂಚೂಣಿ ಯೋಧ ಮಾತ್ರ ಲಸಿಕೆ ಸ್ವೀಕರಿಸಿದ್ದಾರೆ.

ಜಿಲ್ಲೆಯಲ್ಲಿ ಇದುವರೆಗೆ 1,78,382 ಮಂದಿ ಲಸಿಕೆಯ ಮೊದಲ ಡೋಸ್‌ನ್ನು ಪಡೆದರೆ, 38,238 ಮಂದಿ ಎರಡನೇ ಡೋಸ್‌ನ್ನು ಸ್ವೀಕರಿಸಿದ್ದಾರೆ ಎಂದು ಡಾ.ಸೂಡ ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News