ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ
Update: 2021-04-25 20:23 IST
ಬ್ರಹ್ಮಾವರ, ಎ.25: ಮಾನಸಿಕ ಖಾಯಿಲೆಯಿಂದ ಜೀವನದಲ್ಲಿ ಜಿಗುಪ್ಸೆ ಗೊಂಡು ಎ.21ರಂದು ಅಡುಗೆ ಕೋಣೆಯಲ್ಲಿ ತಂದಿರಿಸಿದ ಸೀಮೆ ಎಣ್ಣೆ ಯನ್ನು ಮೈ ಮೇಲೆ ಸುರಿದು ಬೆಂಕಿ ಹಚ್ಚಿ ಆತ್ಮಹತ್ಯೆಗೆ ಯತ್ನಿಸಿದ್ದ ನಡೂರು ಗೋಳಿಬೆಟ್ಟು ನಿವಾಸಿ ಜಯರಾಮ್ ಶೆಟ್ಟಿ ಎಂಬವರ ಪತ್ನಿ ಜ್ಯೋತಿ (44) ಎಂಬವರು ಎ.25ರಂದು ಚಿಕಿತ್ಸೆ ಫಲಕಾರಿಯಾಗದೆ ಮಣಿಪಾಲ ಆಸ್ಪತ್ರೆಯಲ್ಲಿ ಮೃತಪಟ್ಟರು.
ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.