×
Ad

ಕಾಣಿಕೆ ಡಬ್ಬಿ ಕಳವು

Update: 2021-04-25 20:28 IST

ಕಾಪು, ಎ.25: ಮೂಡಬೆಟ್ಟು ಗ್ರಾಮದ ಶಿವಾನಂದ ನಗರದಲ್ಲಿರುವ ಬಬ್ಬುಸ್ವಾಮಿ ದೈವಸ್ಥಾನಕ್ಕೆ ಎ.24ರಂದು ಬೆಳಗ್ಗೆ ನುಗ್ಗಿದ ಕಳ್ಳರು ಕಾಣಿಕೆ ಡಬ್ಬಿ ಕಳವು ಮಾಡಿರುವ ಬಗ್ಗೆ ವರದಿಯಾಗಿದೆ.

ದೈವಸ್ಥಾನದ ಗರ್ಭಗುಡಿಯ ಸಮೀಪ ಇರುವ ಕಾಣಿಕೆ ಡಬ್ಬಿಯನ್ನು ಕಾಣಿಕೆ ಸಮೇತ ಕಳ್ಳರು ಕಳವು ಮಾಡಿಕೊಂಡು ಹೋಗಿದ್ದಾರೆ ಎಂದು ದೂರಲಾಗಿದೆ.

ಈ ಬಗ್ಗೆ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News