ಮುಂದಿನ ವಾರವೂ ರಾಜ್ಯದಲ್ಲಿ ವೀಕೆಂಡ್ ಕರ್ಫ್ಯೂ ಮುಂದುವರೆಯುತ್ತೆ: ಜಗದೀಶ್ ಶೆಟ್ಟರ್

Update: 2021-04-25 16:23 GMT

ಹುಬ್ಬಳ್ಳಿ, ಎ.25:  ಮುಂದಿನ ವಾರವೂ ರಾಜ್ಯದಲ್ಲಿ ವೀಕೆಂಡ್ ಕರ್ಫ್ಯೂ ಮುಂದುವರೆಯುತ್ತದೆ ಎಂದು ಸಚಿವ ಜಗದೀಶ್ ಶೆಟ್ಟರ್ ಹೇಳಿದ್ದಾರೆ. 
ರವಿವಾರ ಹುಬ್ಬಳ್ಳಿ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಬಗ್ಗೆ ಮಾಹಿತಿ ನೀಡಿದರು.

ಲಾಕ್‍ಡೌನ್ ಬಗ್ಗೆಯೂ ಚರ್ಚೆ ನಡೆಯುತ್ತಿದೆ. ಸೋಮವಾರ ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ಚರ್ಚೆ ಆಗಲಿದೆ. ಕ್ಯಾಬಿನೆಟ್‍ನಲ್ಲಿ ಸಿಎಂ ಮುಂದಿನ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ ಎಂದು ಹೇಳಿದರು. ಜಾತ್ರೆ, ಮದುವೆಗೆ ಸಾವಿರಾರು ಜನ ಹೊರಡುತ್ತಿದ್ದಾರೆ. ಅದನ್ನು ನಿಯಂತ್ರಿಸಬೇಕು ಎಂದು ಹೇಳಿದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News