×
Ad

ಸಂವೇದನೆ ಇಲ್ಲದ ಸರಕಾರ ಮಾತ್ರ ಇಂತಹ ಹೇಳಿಕೆ ನೀಡುತ್ತದೆ: ಆದಿತ್ಯನಾಥ್ ವಿರುದ್ಧ ಪ್ರಿಯಾಂಕಾ ಗಾಂಧಿ ಆಕ್ರೋಶ

Update: 2021-04-26 11:35 IST

ಹೊಸದಿಲ್ಲಿ: ರಾಜ್ಯದಲ್ಲಿ ಯಾವುದೇ ಖಾಸಗಿ ಅಥವಾ ಸರಕಾರಿ  ಕೋವಿಡ್-19 ಆಸ್ಪತ್ರೆಗಳಲ್ಲಿ ಆಮ್ಲಜನಕರ ಕೊರತೆ ಇಲ್ಲ ಎಂಬ ಉತ್ತರಪ್ರದೇಶದ ಮುಖ್ಯಮಂತ್ರಿ ಆದಿತ್ಯನಾಥ್ ಅವರ ಹೇಳಿಕೆಗೆ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ರವಿವಾರ ಆಕ್ರೋಶ  ವ್ಯಕ್ತಪಡಿಸಿದ್ದಾರೆ. ಸಂವೇದನೆ ಇಲ್ಲದ ಸರಕಾರ ಮಾತ್ರ ಅಂತಹ ಹೇಳಿಕೆ ನೀಡಲು ಸಾಧ್ಯ ಎಂದಿದ್ದಾರೆ.

ಉತ್ತರಪ್ರದೇಶದ ಯಾವುದೇ ಖಾಸಗಿ ಅಥವಾ ಸರಕಾರಿ ಕೋವಿಡ್ ಆಸ್ಪತ್ರೆಗಳಲ್ಲಿ ಆಮ್ಲಜನಕದ ಕೊರತೆ ಇಲ್ಲ ಎಂದು ಪ್ರತಿಪಾದಿಸಿದ್ದ ಆದಿತ್ಯನಾಥ್ ಅವರು ಶನಿವಾರ ರಾಜ್ಯ ಸರಕಾರವು ವಿವಿಧ ಸಂಸ್ಥೆಗಳ ಸಹಯೋಗದೊಂದಿಗೆ ಜೀವ ಉಳಿಸುವ ಅನಿಲದ ಲೆಕ್ಕ ಪರಿಶೋಧನೆ ನಡೆಸಲಿದೆ ಎಂದಿದ್ದರು.

ಆದಿತ್ಯನಾಥ್ ಅವರ ಹೇಳಿಕೆಗಳ  ಮಾಧ್ಯಮ ವರದಿಯನ್ನು ಟ್ಯಾಗ್ ಮಾಡಿ ಹಿಂದಿಯಲ್ಲಿ ಟ್ವೀಟಿಸಿದ ಪ್ರಿಯಾಂಕಾ, ಆಮ್ಲಜನಕದ ಕೊರತೆಯಿಂದಾಗಿ ಆಸ್ಪತ್ರೆಯಲ್ಲಿ ಸೇರಿಸಿಕೊಳ್ಳುವುದಿಲ್ಲ ಎಂದು ಹೇಳಲಾದ ರೋಗಿಯ ಸ್ಥಾನದಲ್ಲಿ ನಿಂತು ನೀವೇ ಊಹಿಸಿಕೊಳ್ಳಿ.  ಸೂಕ್ಷ್ಮವಾಗಿ ಯೋಚಿಸದ ಸರಕಾರ ಮಾತ್ರ ಇಂತಹ ಹೇಳಿಕೆ ನೀಡಲು ಸಾಧ್ಯ ಎಂದು ಹೇಳಿದ್ದಾರೆ.

ಆದಿತ್ಯನಾಥ್ ಅವರ ಹೇಳಿಕೆ ಇರುವ ಮತ್ತೊಂದು ಮಾಧ್ಯಮ ವರದಿಯನ್ನು ಟ್ವಿಟರ್ ನಲ್ಲಿ ಟ್ಯಾಗ್ ಮಾಡಿದ ಕಾಂಗ್ರಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ, ನೀವು ನನ್ನ ವಿರುದ್ಧ ಮೊಕದ್ದಮೆ ಹೂಡಲು ಬಯಸಿದರೆ ನನ್ನ ಆಸ್ತಿಯನ್ನು ವಶಪಡಿಸಿಕೊಳ್ಳಿ. ದೇವರಿಗೋಸ್ಕರವಾದರೂ ಪರಿಸ್ಥಿತಿಯ ಗಂಭೀರತೆಯನ್ನು ಗುರುತಿಸಿ ಜನರ ಪ್ರಾಣವನ್ನು ಉಳಿಸಲು ತಕ್ಷಣ ಕಾರ್ಯಪ್ರವೃತ್ತರಾಗಿ ಎಂದು ಹಿಂದಿಯಲ್ಲಿ ಟ್ವೀಟಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News