ಕೊರೋನ ಸೋಂಕಿತ ವ್ಯಕ್ತಿ ಆತ್ಮಹತ್ಯೆ

Update: 2021-04-26 09:54 GMT

ಮಂಡ್ಯ :   ಕೊರೋನ ಸೋಂಕಿತ ವ್ಯಕ್ತಿಯೋರ್ವ ಶ್ರೀರಂಗಪಟ್ಟಣದ ಸರಕಾರಿ ಆಸ್ಪತ್ರೆ ಆವರಣದಲ್ಲಿನ ಮರಕ್ಕೆ ನೇಣು ಬಿಗಿದು ಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸೋಮವಾರ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯನ್ನು ಶ್ರೀರಂಗಪಟ್ಟಣ ತಾಲೂಕು ಅರಕೆರೆ ಗ್ರಾಮ ನಿವಾಸಿ ಎಂದು ತಿಳಿದುಬಂದಿದ್ದು,  ಅವರು ಎ.21ರಿಂದ ಕೊರೋನ ಸೋಂಕಿಗೆ ಚಿಕಿತ್ಸೆ ಪಡೆಯುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. 

ಈ ಸಂಬಂಧ ಶ್ರೀರಂಗಪಟ್ಟಣ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News